
ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ (Accident) ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ (Chitradurga) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ (National Highway-13) ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು (Chitradurga Rural Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


