
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಕಛೇರಿ ಹಾಗೂ ಕಾರ್ಪೊರೇಟರ್ ಕಛೇರಿಯ ಉದ್ಘಾಟನೆಯು ದಿನಾಂಕ 10-9-23 ಆದಿತ್ಯವಾರ ಸಂಜೆ 4.30 ಚೊಕ್ಕಬೆಟ್ಟುವಿನಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಉಸ್ಮಾನ್ ಗುರುಪುರ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ನೂತನ ಕಛೇರಿಯನ್ನು SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಉದ್ಘಾಟಿಸಲಿದ್ದು ಹಾಗೂ ಕಾರ್ಪೊರೇಟರ್ ಕಛೇರಿಯನ್ನು SDPI ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಉದ್ಘಾಟಿಸಲಿದ್ದಾರೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಕಾರ್ಪೋರೇಟರ್ ಶಂಶಾದ್ ಅಬೂಬಕ್ಕರ್, ಸುರತ್ಕಲ್ ಬ್ಲಾಕ್ ಅಧ್ಯಕ್ಷ ಸಲಾಂ ಕಾನ ಹಾಗೂ ಇನ್ನಿತರ ಗಣ್ಯ ಅತಿಥಿಗಳು ಭಾಗವಹಿಸಿದ್ದಾರೆ ಎಂದು ಕ್ಷೇತ್ರ ಕಾರ್ಯದರ್ಶಿ ಅಝರ್ ಉಳಾಯಿಬೆಟ್ಟು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
