
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 112ನೇ ಶಾಖೆ ಮಂಗಳೂರಿನ ಬೆಂಗ್ರೆಯಲ್ಲಿ ಕಾರ್ಯಾರಂಭಗೊಂಡಿದೆ. ಸ್ಯಾಂಡ್ ಪಿಟ್ ಬೆಂಗ್ರೆಯ ಎಸ್.ಕೆ. ಅಮೀನ್ ಸಮುದಾಯ ಭವನ ಕಟ್ಟಡದಲ್ಲಿ ಪ್ರಾರಂಭಿಸಲಾಗಿರುವ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಿದರು


ಬೆಂಗ್ರೆ ವಾರ್ಡ್ ಕಾರ್ಪೊರೇಟರ್ ಮುನೀಬ್ ಬೆಂಗ್ರೆ ಹೊಸ ಸ್ವಸಹಾಯ ಸಂಘಗಳನ್ನು, ನವಮಂಗಳೂರು ಬಂದರು ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಭರತ್ ಕುಮಾರ್ ಕಂಪ್ಯೂಟರೀಕರಣವನ್ನು ಹಾಗೂ ನೀರೇಶ್ವಾಲ್ಯ ಮೊಗವೀರ ಗ್ರಾಮ ಸಭಾ ಅಧ್ಯಕ್ಷ ಸುರೇಶ್ ಸುವರ್ಣ ಅವರು ಭದ್ರತಾ ಕೋಶವನ್ನು ಉದ್ಘಾಟಿಸಿದರು.ಬೆಂಗ್ರೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂಜಯ್ ಸುವರ್ಣ, ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಕೇಶವ ಕರ್ಕೇರ, ಮತ್ಯೋದ್ಯಮಿಗಳಾದ ಶಶಿಕುಮಾರ್ ಬೆಂಗ್ರೆ ಮತ್ತು ಮೋಹನ್ ಬೆಂಗ್ರೆ, ಅಲ್ ಮದ್ರಸತುಲ್ ದೀನಿಯ್ಯ ಅಸೋಸಿಯೇಷನ್ ಅಧ್ಯಕ್ಷ ಬಿಲಾಲ್ ಮೊಯ್ದಿನ್, ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಬ್ಯಾಂಕಿನ ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ.ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಎಸ್. ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಎಂ. ಮಹೇಶ್ ಹೆಗ್ಡೆ, ಕೆ. ಜೈರಾಜ್ ಬಿ. ರೈ, ಬಿ. ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ರಮೇಶ್ ಎಚ್.ಎನ್, ಬೆಂಗ್ರೆ ಶಾಖೆಯ ವ್ಯವಸ್ಥಾಪಕ ಸುದರ್ಶನ ಕುಮಾರ್ ಯು.ಕೆ. ಮತ್ತಿತರರು ಉಪಸ್ಥಿತರಿದ್ದರು.

: ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಬೆಂಗ್ರೆಯ ಜನರು ಇದುವರೆಗೆ ಬ್ಯಾಂಕಿಂಗ್ ಸೌಲಭ್ಯಕ್ಕೆ ದೂರದ ಪಣಂಬೂರು, ಕೂಳೂರು ಆಥವಾ ಸ್ಟೇಟ್ ಬ್ಯಾಂಕ್ ಭಾಗಕ್ಕೆ ಬಸ್ಸು ಇಲ್ಲವೇ ದೋಣಿಯ ಮೂಲಕ ಹೋಗ ಬೇಕಿತ್ತು. ಇದಕ್ಕಾಗಿ ಸಮಯ ಮತ್ತು ಹಣ ವ್ಯರ್ಥವಾಗುತ್ತಿತ್ತು. ಇದೀಗ ಎಸ್.ಸಿ.ಡಿ.ಸಿ.ಸಿ. ಬ್ಯಾಂಕು ಶಾಖೆಯನ್ನು ಅರಂಭಿಸಿದ್ದರಿಂದ ಬೆಂಗ್ರೆಯ ಜನರಿಗೆ ಹಣ ಮತ್ತು ಸಮಯ ಎರಡೂ ಉಳಿತಾಯವಾಗಿದೆ. ಇದಕ್ಕಾಗಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸುತ್ತೇನೆ ಎಂದರು

ಅಧ್ಯಕ್ಷತೆ ವಹಿಸಿದ್ದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಬ್ಯಾಂಕಿನ ವ್ಯವಹಾರ ಚೆನ್ನಾಗಿ ನಡೆಯಲು ಗ್ರಾಹಕರ ಸಹಕಾರ ಅಗತ್ಯ. ಬೆಂಗ್ರೆಯಲ್ಲಿ ಮೀನುಗಾರರೇ ಅಧಿಕ ಸಂಖ್ಯೆಯಲ್ಲಿದ್ದು, ಅವರಿಗೆ ಈ ಶಾಖೆಯಿಂದ ಹೆಚ್ಚು ಪ್ರಯೋಜನ ಸಿಗಲಿದೆ. ಮಹಿಳೆಯರಿಗಾಗಿ ಬ್ಯಾಂಕ್ ಹತ್ತಾರು ಯೋಜನೆಗಳನ್ನು ರೂಪಿಸಿದ್ದು, ಅವಗಳ ಪ್ರಯೋಜನ ಪಡೆದುಕೊಳ್ಳ ಬೇಕು. ಸಾಲ ಮರುಪಾವತಿಸುವಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಎಸ್.ಸಿ.ಡಿ.ಸಿ.ಸಿ. ಬ್ಯಾಂಕು ಯಾವತ್ತೂ ವಿಲೀನಗೊಳ್ಳುವುದಿಲ್ಲ. ಬದಲಾಗಿ ಜನರ ಅನುಕೂಲಕ್ಕೆ ತಕ್ಕಂತೆ ಶಾಖೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
