Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಕ್ರಿಮಿನಲ್‌ ಕೇಸುಗಳ ಮಾಧ್ಯಮ ವಿಚಾರಣೆ ಸಲ್ಲ: ನ್ಯೂಸ್ ರೂಮ್ ಕೋರ್ಟ್‌ಗೆ ಕಡಿವಾಣ ಹಾಕಿ: ಸುಪ್ರೀಂಕೋರ್ಟ್

editor tv by editor tv
September 14, 2023
in ರಾಷ್ಟ್ರೀಯ
0
ಕ್ರಿಮಿನಲ್‌ ಕೇಸುಗಳ ಮಾಧ್ಯಮ ವಿಚಾರಣೆ ಸಲ್ಲ: ನ್ಯೂಸ್ ರೂಮ್ ಕೋರ್ಟ್‌ಗೆ ಕಡಿವಾಣ ಹಾಕಿ: ಸುಪ್ರೀಂಕೋರ್ಟ್
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಕ್ರಿಮಿನಲ್‌ ಅಪರಾಧ ಪ್ರಕರಣಗಳ ಸಂಬಂಧ ನಡೆಯುವ ಮಾಧ್ಯಮದ ವಿಚಾರಣೆ ನ್ಯಾಯದ ದಿಕ್ಕು ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್‌, ಇಂಥ ಪ್ರಕರಣಗಳಲ್ಲಿ ಪೊಲೀಸರು ಮಾಧ್ಯಮಗಳಿಗೆ ಯಾವ ರೀತಿ ಮಾಹಿತಿ ನೀಡಬೇಕು ಎಂಬುದರ ಕುರಿತು 3 ತಿಂಗಳಲ್ಲಿ ಮಾರ್ಗಸೂಚಿ ರಚಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ. ಕ್ರಿಮಿನಲ್‌ ಪ್ರಕರಣಗಳಲ್ಲಿ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡುವುದರ ಕುರಿತಾಗಿ ಪ್ರಾಮಾಣಿತ ಕಾರ್ಯಾಚರಣೆ ವ್ಯವಸ್ಥೆ (ಎಸ್‌ಒಪಿ)ಯನ್ನು ಶೀಘ್ರವಾಗಿ ಜಾರಿ ಮಾಡುವುದು ಅಗತ್ಯವಾಗಿದೆ. ಮುದ್ರಣ, ಎಲೆಕ್ಟ್ರಾನಿಕ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾಧ್ಯಮ ವಿಚಾರಣೆಯ ಘಟನೆಗಳು ಹೆಚ್ಚಾಗುತ್ತಿರುವ ಕಾರಣ ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಿದ್ದ ತ್ರಿಸದಸ್ಯ ಪೀಠ ಹೇಳಿದೆ.

ಅಪರಾಧ ಪ್ರಕರಣಗಳಲ್ಲಿ (criminal case) ಮಾಧ್ಯಮಗಳಿಗೆ ಮಾಹಿತಿ ನೀಡುವಾಗ ಏಕರೂಪತೆಯನ್ನು ಪೊಲೀಸರು ಅನುಸರಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಈ ಪೀಠ ವಿಚಾರಣೆ ನಡೆಸುತ್ತಿದೆ. ಈ ನಿಯಮವನ್ನು ಜಾರಿಗೆ ತರುವಾಗ ಮಾಧ್ಯಮಗಳ ಮೂಲಭೂತ ಹಕ್ಕಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ (Freedom of expression) ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಆರೋಪಿಗಳ ಸರಿಯಾದ ವಿಚಾರಣೆ ಮತ್ತು ಸಂತ್ರಸ್ತರ ಮಾಹಿತಿ ಗೌಪ್ಯತೆ ಕಾಪಾಡುವುದಕ್ಕೂ ಗಮನ ಹರಿಸಬೇಕು ಎಂದು ಕೋರ್ಟ್‌ ಹೇಳಿದೆ.

2010ರ ಬಳಿಕ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ (central Govt) ಯಾವುದೇ ನಿಯಮಾವಳಿ ಬಿಡುಗಡೆಯಾಗಿಲ್ಲ ಎಂಬುದನ್ನು ಗಮನಿಸಿರುವ ಕೋರ್ಟ್‌, ಹೊಸ ನೀತಿ ರೂಪಿಸಲು 1 ತಿಂಗಳಿನೊಳಗೆ ಸಲಹೆಗಳನ್ನು ಕಳುಹಿಸುವಂತೆ ಎಲ್ಲಾ ರಾಜ್ಯಗಳ ಡಿಜಿಪಿಗಳಿಗೆ ಸೂಚಿಸಿದೆ. ಈ ವೇಳೆ ಮಾನವ ಹಕ್ಕು ಆಯೋಗದ ಸಲಹೆಗಳನ್ನು ಪಾಲಿಸಬೇಕು ಎಂದೂ ಹೇಳಿದೆ. ವಿಚಾರಣೆಯ ಆರಂಭಿಕ ಹಂತದಲ್ಲಿ ಪೊಲೀಸರು ಮಾಧ್ಯಮಗಳಿಗೆ ನೀಡುವ ಮಾಹಿತಿ ನ್ಯಾಯಾಂಗದ ವಿಚಾರಣೆಯನ್ನು ಹಾದಿ ತಪ್ಪಿಸಬಹುದು. ಅಲ್ಲದೇ ಇದು ನ್ಯಾಯಾಧೀಶರನ್ನು ಪ್ರಭಾವಿಸಬಹುದು ಎಂದು ಕೋರ್ಟ್‌ ಹೇಳಿದೆ.

ಮಾಧ್ಯಮಗಳಿಗೆ ಪೊಲೀಸರು ನೀಡುವ ಮಾಹಿತಿಗೆ ಸಂಬಂಧಿಸಿದಂತೆ ಏಕರೂಪದ ಕಾನೂನು ಜಾರಿ ಮಾಡದಿದ್ದರೆ ಇದರಲ್ಲಿ ಏಕತೆಯನ್ನು ತರಲು ಸಾಧ್ಯವಿಲ್ಲ. ಪ್ರಾಥಮಿಕ ಹಂತದಲ್ಲಿ ಮಾಧ್ಯಮ ವಿಚಾರಣೆ ಆರೋಪಿಗಳು ಹಾಗೂ ಸಂತ್ರಸ್ತರ ಹಕ್ಕುಗಳನ್ನು ಉಲ್ಲಂಘನೆ ಮಾಡುತ್ತದೆ. ಮಾಧ್ಯಮದ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ ಮತ್ತು ಗ್ರಾಹಕರು ನ್ಯಾಯಯುತ ಮತ್ತು ಪಕ್ಷಪಾತವಿಲ್ಲವಿಲ್ಲದ ಮಾಹಿತಿಯನ್ನು ಪಡೆಯುವ ಹಕ್ಕು ಹೊಂದಿದ್ದಾರೆ ಎಂಬುದನ್ನು ಅಲ್ಲಗಳೆಯಲಾಗುವುದಿಲ್ಲ. ಹಾಗೆಯೇ ಆರೋಪಿಗಳಿಗೂ ಸಹ ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ತನಿಖೆ ದೊರೆಯಬೇಕು. ಆದರೆ ಮಾಧ್ಯಮಗಳಲ್ಲಿ ನಡೆಯುವ ಪಕ್ಷಪಾತದ ವಿಚಾರಣೆ ಆರೋಪಿ ಅಪರಾಧಿ ಎಂಬ ಭಾವವನ್ನು ಸಾರ್ವಜನಿಕರಲ್ಲಿ ಮೂಡಿಸುತ್ತದೆ. ಇದು ಅಪರಾಧದಲ್ಲಿ ಬಲಿಪಶುಗಳಾದವರ ಅಥವಾ ಬದುಕುಳಿದವರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಕೋರ್ಟ್‌(Supreme court) ಹೇಳಿದೆ.

ಅಪರಾಧ ಪ್ರಕರಣಗಳ ತನಿಖೆಯನ್ನು ಬಹಿರಂಗ ಪಡಿಸುವುದಕ್ಕೆ ನಿರ್ಬಂಧ ವಿಧಿಸುವುದು ಸರಿಯಲ್ಲ. ಆದರೆ ಊಹೆಯ ಆಧಾರದಲ್ಲಿ ಮಾಧ್ಯಮಗಳಲ್ಲಿ ನಡೆಯುವ ವಿಚಾರಣೆ ಸರಿಯಲ್ಲ. ಹಾಗಾಗಿ ಇದನ್ನು ನಿಯಂತ್ರಿಸಲು ಏಕರೂಪದ ನಿಯಮವನ್ನು ಜಾರಿ ಮಾಡಬೇಕು. ಮಾಧ್ಯಮಗಳಿಗೆ ಬಿಡುಗಡೆ ಮಾಡುವ ಹೇಳಿಕೆಗಳು ಆರೋಪಿಗಳ ಬಗ್ಗೆ ಪೂರ್ವಾಗ್ರಹ ಹೊಂದುವಂತೆ ಮಾಡಬಾರದು ಎಂದು ಕೋರ್ಟ್‌ ಸೂಚಿಸಿದೆ. ಹಿರಿಯ ವಕೀಲ ಗೋಪಾಲ್‌ ಶಂಕರನಾರಾಯಣ (Gopal shankarnarayan)ಅವರನ್ನು ಈ ಪ್ರಕರಣದಲ್ಲಿ ಅಮಿಕಸ್‌ ಕ್ಯೂರಿಯಾಗಿ (Amicus Curiae) ನೇಮಕ ಮಾಡಲಾಗಿದೆ.

ಮಾಧ್ಯಮದಲ್ಲಿ ನಡೆಯುವ ವಿಚಾರಣೆ ನ್ಯಾಯದ ದಿಕ್ಕು ತಪ್ಪಿಸಬಹುದು
ಹೀಗಾಗಿ ಕ್ರಿಮಿನಲ್‌ ಕೇಸುಗಳ ಬಗ್ಗೆ ಪೊಲೀಸರು ಮಾಧ್ಯಮಗಳಿಗೆ ಹೇಗೆ ಮಾಹಿತಿ ನೀಡಬೇಕು ಎಂಬ ಬಗ್ಗೆ ಮಾರ್ಗಸೂಚಿ ರಚಿಸಬೇಕು
ಹೊಸ ನೀತಿ ರೂಪಿಸಲು 1 ತಿಂಗಳೊಳಗೆ ಎಲ್ಲಾ ರಾಜ್ಯಗಳ ಡಿಜಿಪಿಗಳು ಸಲಹೆ ಕಳುಹಿಸಬೇಕು
ಮಾಧ್ಯಮಗಳ ವಾಕ್‌ ಸ್ವಾತಂತ್ರ್ಯಕ್ಕೆ ಧಕ್ಕೆ ಆಗದಂತೆ ಕೇಂದ್ರ ಸರ್ಕಾರ ನಿಯಮ ರೂಪಿಸಬೇಕು

Previous Post

ಕಾಶ್ಮೀರದಲ್ಲಿ ಉಗ್ರರ ಎನ್‌ಕೌಂಟರ್; ಕರ್ನಲ್, ಮೇಜರ್, ಪೊಲೀಸ್ ಅಧಿಕಾರಿ ಹುತಾತ್ಮ!

Next Post

MLA ticket cheating case: ನಕಲಿ ನಾಯಕರುಗಳ ಮಧ್ಯೆ ಒಮ್ಮೆ ಅಸಲಿ ಸಚಿವರನ್ನೇ ಭೇಟಿ ಮಾಡಿಸಿದ್ದ ವಂಚಕಿ ​​ ಚೈತ್ರಾ ಕುಂದಾಪುರ, ಅಂದಿನ ಸಚಿವ ಸುನಿಲ್ ಕುಮಾರ್​ರನ್ನು ಭೇಟಿ ಮಾಡಿಸಿದ್ದಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.