| Edited By: Ashraf Kammaje
Updated on: Sep 19, 2023 | 11:16 AM

ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೂ ಸಿಕ್ಕಿದ್ದಿದ್ದಾನೆ.
ಬೆಂಗಳೂರು, (ಸೆಪ್ಟೆಂಬರ್ 19): ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಕೊನೆಗೂ ಸಿಕ್ಕಿದ್ದಿದ್ದಾನೆ. ಕಳೆದ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ ದಾಖಲಾದಾಗಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಇದೀಗ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು, ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಪಿ ಬಂಧನಕ್ಕೆ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದರು. ಹೈದರಾಬಾದ್‍ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಅಲ್ಲಿಗೂ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿತ್ತು. ಅಲ್ಲದೇ ಸ್ವಾಮೀಜಿ ಆಪ್ತರ ತೀವ್ರ ವಿಚಾರಣೆ ಕೂಡ ನಡೆಸಲಾಗಿತ್ತು. ಇದೀಗ ಒಡಿಸ್ಸಾದ ಹೋಟೆಲ್ ಒಂದರಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಹಾಲಶ್ರೀ ಫೋನ್ ಬಳಸದೆ ಪದೇ ಪದೇ ಇರುವ ಸ್ಥಳ ಬದಲಾಯಿಸುತ್ತಿದ್ದು, ಬಂಧನಕ್ಕೆ ಸ್ವಲ್ಪ ಕಷ್ಟವಾಗಿತ್ತು. ಆದರೆ ಇದೀಗ ಆರೋಪಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವುದು ಖಚಿತವಾಗಿದೆ. ಸ್ವಾಮೀಜಿಗಾಗಿ ಪ್ರತ್ಯೇಕವಾಗಿ ಎರಡು ತಂಡಗಳು ಕಾರ್ಯಚರಣೆ ನಡೆಸುತ್ತಿದ್ದವು.
