
ಮಂಗಳೂರು: ಕಾವೇರಿ (Cauvery) ನೀರನ್ನು ತಮಿಳುನಾಡಿಗೆ (Tamil Nadu) ಬಿಡುತ್ತಿರುವ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಸೇರಿದಂತೆ ರಾಜ್ಯಾದ್ಯಂದ ಶುಕ್ರವಾರ ಬಂದ್ (Karnataka Bandh) ನಡೆಸುತ್ತಿವೆ. ಆದರೆ ಕರಾವಳಿ ಭಾಗ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ (Mangaluru) ಎಲ್ಲಾ ಹೋಟೆಲ್, ಪೆಟ್ರೋಲ್ ಬಂಕ್‌ಗಳು ತೆರೆದಿದ್ದು, ಎಲ್ಲಾ ಉದ್ಯಮಗಳೂ ಎಂದಿನಂತೆ ನಡೆಯುತ್ತಿವೆ. ಕರ್ನಾಟಕ ಬಂದ್ ಇದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರಿ ಕಚೇರಿಗಳು ಕೂಡಾ ಎಂದಿನಂತೆ ನಿರ್ವಹಿಸುತ್ತಿವೆ. ಜನರ ನಿತ್ಯದ ವಹಿವಾಟುಗಳು ಮುಂಜಾನೆಯಿಂದಲೇ ಆರಂಭವಾಗಿವೆ.

ಜೀವನದಿ ಕಾವೇರಿಗಾಗಿ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಇದಕ್ಕೆ ರಾಜ್ಯಾದ್ಯಂತ 1,600ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ-ಜೆಡಿಎಸ್ ಕೂಡಾ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿ ಸಂಜೆ 6 ಗಂಟೆ ವರೆಗೂ ನಡೆಯಲಿದೆ

Follow the HAYATH TV channel on WhatsApp: https://whatsapp.com/channel/0029VaAs7nn1CYoX0bPfYZ2D
🛑HAYATH TV ಈಗ WhatsApp ಚಾನೆಲ್ ನಲ್ಲಿ ಲಭ್ಯ