
ಬೆಳಗಾವಿ : ಕಳೆದ ಭಾನುವಾರ ಸಂಜೆ ಶಿವಮೊಗ್ಗ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಲ್ಲು ತೂರಾಟ, ಗಲಭೆ ಪ್ರಕರಣ ಸಂಬಂಧ ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಬಿಜೆಪಿಗೆ ಆರೋಪ ಮಾಡೋದು ಬಿಟ್ಟು ಬೇರೆ ಗೊತ್ತಿಲ್ಲ, ಆರೋಪ ಮಾಡೋದು ಬಿಜೆಪಿಯವರ ಕೆಲಸ. ಆರೋಪ ಸತ್ಯವಲ್ಲ, ಎಲ್ಲಾ ಸುಳ್ಳು ಆರೋಪ. ಶಿವಮೊಗ್ಗದಲ್ಲಿ ಎಲ್ಲಿ ಕೋಮು ಗಲಭೆ ಆಗಿದೆ..? ಎಂದು ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ..? ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ತಗೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ಕೋಮುಗಲಭೆ ತಕ್ಷಣ ಹತ್ತಿಕ್ಕುವ ಕೆಲಸ ಮಾಡುತ್ತೆ. ಯಾರೇ ಕೋಮುಗಲಭೆ ಮಾಡಿದ್ರೂ ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತೆವೆ ಎಂದು ಬೆಳಗಾವಿಯಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

