Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Explainer: ಭಾರತದಲ್ಲಿ ಸಲಿಂಗ ವಿವಾಹಕ್ಕೆ ಇಲ್ಲ ಕಾನೂನು ಮಾನ್ಯತೆ; ಸುಪ್ರೀಂಕೋರ್ಟ್ ಹೇಳಿದ್ದೇನು?

editor tv by editor tv
October 17, 2023
in ರಾಷ್ಟ್ರೀಯ
0
Explainer: ಭಾರತದಲ್ಲಿ ಸಲಿಂಗ ವಿವಾಹಕ್ಕೆ ಇಲ್ಲ ಕಾನೂನು ಮಾನ್ಯತೆ; ಸುಪ್ರೀಂಕೋರ್ಟ್ ಹೇಳಿದ್ದೇನು?
1.9k
VIEWS
Share on FacebookShare on TwitterShare on Whatsapp

Same-sex marriage: ಸಲಿಂಗ ವಿವಾಹಕ್ಕೆ ಅವಕಾಶ ಕಲ್ಪಿಸಲು ವಿಶೇಷ ವಿವಾಹ ಕಾಯ್ದೆಯ ಆಡಳಿತದಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬುದನ್ನು ಸಂಸತ್ ನಿರ್ಧರಿಸಬೇಕು ಎಂದು ಸುಪ್ರೀಂ ಪೀಠ ಹೇಳಿದೆ. ಅದೇ ಸಮಯದಲ್ಲಿ, ಹಾಗೆ ಮಾಡಲು ವಿಫಲವಾದರೆ ಕ್ವೀರ್ ದಂಪತಿಗಳ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್ ಸೇರಿದಂತೆ ಒಟ್ಟಾರೆ ಭಿನ್ನವಾಗಿರುವರನ್ನು ಸಂಬೋಧಿಸಲು ಕ್ವೀರ್ ಪದವನ್ನು ಬಳಸಲಾಗುತ್ತದೆ) ವಿರುದ್ಧ ತಾರತಮ್ಯ ಉಂಟಾಗುತ್ತದೆ ಎಂದು ಅದು ಸೂಚಿಸಿತು.

ದೆಹಲಿ ಅಕ್ಟೋಬರ್ 17 : ಭಾರತದಲ್ಲಿ ಸಲಿಂಗ ವಿವಾಹ ವನ್ನು(Same-sex marriage) ಕಾನೂನುಬದ್ಧಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್ (Supreme Court) ಮಂಗಳವಾರ 3:2 ಬಹುಮತದ ತೀರ್ಪಿನಲ್ಲಿ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ (Chief Justice D Y Chandrachud) ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ, ಸಲಿಂಗ ದಂಪತಿಗಳಿಗೆ ಮದುವೆಯಾಗುವ ಅಥವಾ ಒಟ್ಟಾಗಿ ಬಾಳುವ ಹಕ್ಕನ್ನು ಕಾನೂನು ಗುರುತಿಸುವುದಿಲ್ಲ ಎಂದು ಹೇಳಿದೆ. ಈ ಬಗ್ಗೆ ಕಾನೂನು ರೂಪಿಸುವುದು ಸಂಸತ್ ಗೆ ಬಿಟ್ಟದ್ದು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಪೀಠದ ಇತರ ಸದಸ್ಯರಾಗಿದ್ದರು. ನ್ಯಾಯಮೂರ್ತಿಗಳಾದ ಚಂದ್ರಚೂಡ್ ಮತ್ತು ಕೌಲ್ ಅವರು ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ಮನವಿಯನ್ನು ಬೆಂಬಲಿಸಿದರೆ, ಇತರ ಮೂವರು ನ್ಯಾಯಾಧೀಶರು ಅದನ್ನು ತಿರಸ್ಕರಿಸಿದರು. 10 ದಿನಗಳ ನಿರಂತರ ವಿಚಾರಣೆಯ ನಂತರ ಪೀಠವು ಮೇ 11 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಸಲಿಂಗ ವಿವಾಹಕ್ಕೆ ಅವಕಾಶ ಕಲ್ಪಿಸಲು ವಿಶೇಷ ವಿವಾಹ ಕಾಯ್ದೆಯ ಆಡಳಿತದಲ್ಲಿ ಬದಲಾವಣೆ ಅಗತ್ಯವಿದೆಯೇ ಎಂಬುದನ್ನು ಸಂಸತ್ ನಿರ್ಧರಿಸಬೇಕು ಎಂದು ಸುಪ್ರೀಂ ಪೀಠ ಹೇಳಿದೆ. ಅದೇ ಸಮಯದಲ್ಲಿ, ಹಾಗೆ ಮಾಡಲು ವಿಫಲವಾದರೆ ಕ್ವೀರ್ ದಂಪತಿಗಳ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್ ಸೇರಿದಂತೆ ಒಟ್ಟಾರೆ ಭಿನ್ನವಾಗಿರುವರನ್ನು ಸಂಬೋಧಿಸಲು ಕ್ವೀರ್ ಪದವನ್ನು ಬಳಸಲಾಗುತ್ತದೆ) ವಿರುದ್ಧ ತಾರತಮ್ಯ ಉಂಟಾಗುತ್ತದೆ ಎಂದು ಅದು ಸೂಚಿಸಿತು.

ಈ ನ್ಯಾಯಾಲಯವು ಶಾಸಕಾಂಗ ಡೊಮೇನ್‌ಗೆ ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕು. ವಿಶೇಷ ವಿವಾಹ ಕಾಯಿದೆಯ ಮಿತಿಗಳ ಕಾರಣದಿಂದ ನ್ಯಾಯಾಲಯವು ಅದನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಒಬ್ಬರ ಬಾಳ ಸಂಗಾತಿಯನ್ನು ಆಯ್ಕೆ ಮಾಡುವ ವಿಷಯವು ಸಂವಿಧಾನದ 21ನೇ ವಿಧಿಯಡಿ ಒಬ್ಬರ ಬದುಕು ಮತ್ತು ಸ್ವಾತಂತ್ರ್ಯದ ಹಕ್ಕಿಗೆ ಸಂಬಂಧಿಸಿದ್ದಾಗಿದೆ. ಅದರಲ್ಲಿ ತಮ್ಮ ಬಾಳ ಸಂಗಾತಿಯ ಆಯ್ಕೆ ಮತ್ತು ಅದನ್ನು ದೃಢಪಡಿಸುವುದು ಕೂಡಾ ಒಳಗೊಂಡಿದೆ. ಇದನ್ನು ಗುರುತಿಸದಿರುವುದು ತಾರತಮ್ಯವೇ ಸರಿ’ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ

ಅಂತಹ ದಂಪತಿಗಳಿಗೆ ನೀಡಬಹುದಾದ ಹಕ್ಕುಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಸಮಿತಿಯನ್ನು ರಚಿಸುತ್ತದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಗಳ ಬಹು ನಿರೀಕ್ಷಿತ ತೀರ್ಪನ್ನು ಪ್ರಕಟಿಸುವಾಗ ಮುಖ್ಯ ನ್ಯಾಯಮೂರ್ತಿ ಮೂರು ತೀರ್ಮಾನಗಳನ್ನು ಮಾಡಿದರು. 1. ಪ್ರಕರಣವನ್ನು ವಿಚಾರಣೆ ಮಾಡುವ ಅಧಿಕಾರ ನ್ಯಾಯಾಲಯಕ್ಕೆ ಇದೆ. 2. ಕ್ವೀರ್ ಯುಗಗಳಿಂದಲೂ ಭಾರತಕ್ಕೆ ತಿಳಿದಿರುವ ನೈಸರ್ಗಿಕ ವಿದ್ಯಮಾನವಾಗಿದೆ. ಇದು ನಗರ ಅಥವಾ ಗಣ್ಯರ ಸಮುದಾಯದಲ್ಲಿರುವುದಲ್ಲ. 3. ಮದುವೆ ಸ್ಥಿರ ಅಲ್ಲ.

ಸಲಿಂಗಕಾಮವು ನಗರ ಪರಿಕಲ್ಪನೆಯಲ್ಲ

ಸಲಿಂಗಕಾಮವನ್ನು ನಗರ ಪರಿಕಲ್ಪನೆ ಎಂದು ಪರಿಗಣಿಸುವುದು ಸರಿಯಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. “ಸಲಿಂಗಕಾಮ ಅಥವಾ ಕ್ವೀರ್ ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗದವರಿಗೆ ಸೀಮಿತವಾಗಿಲ್ಲ. ಇಂಗ್ಲಿಷ್ ಮಾತನಾಡುವ ವೈಟ್ ಕಾಲರ್ ಪುರುಷ ಕ್ವೀರ್ ಎಂದು ಹೇಳಿಕೊಳ್ಳುವುದಾದರೆ ಅದೇ ರೀತಿ ಹಳ್ಳಿಯಲ್ಲಿ ಕೃಷಿ ಕೆಲಸದಲ್ಲಿ ಕೆಲಸ ಮಾಡುವ ಮಹಿಳೆಯೂ ಹೇಳಬಹುದು. ಕ್ವೀರ್ ಜನರು ನಗರ ಮತ್ತು ಗಣ್ಯ ಸಮುದಾಯದ ಸ್ಥಳಗಳಲ್ಲಿ ಮಾತ್ರ ಇರುತ್ತಾರೆ ಎಂದು ಕಲ್ಪಿಸಿಕೊಳ್ಳಬಾರದು. ಒಬ್ಬರ ಜಾತಿ ಅಥವಾ ವರ್ಗ ಅಥವಾ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಕ್ವೀರ್​​ನೆಸ್ ಇರಬಹುದು” ಎಂದು ಡಿ ವೈ ಚಂದ್ರಚೂಡ್ ಹೇಳಿದರು.

Previous Post

ಬೆಂಗಳೂರಲ್ಲಿ ಪ್ಯಾಲೆಸ್ತೀನ್‌ ಪರವಾಗಿ ಪ್ರತಿಭಟಿಸಿದವರ ಮೇಲೆ ಕೇಸ್‌ ದಾಖಲು

Next Post

ತಮಿಳುನಾಡಿನ 2 ಪಟಾಕಿ ಘಟಕಗಳಲ್ಲಿ ಸ್ಫೋಟ: 11 ಮಂದಿ ಸಾವು

Next Post
ತಮಿಳುನಾಡಿನ 2 ಪಟಾಕಿ ಘಟಕಗಳಲ್ಲಿ ಸ್ಫೋಟ: 11 ಮಂದಿ ಸಾವು

ತಮಿಳುನಾಡಿನ 2 ಪಟಾಕಿ ಘಟಕಗಳಲ್ಲಿ ಸ್ಫೋಟ: 11 ಮಂದಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.