
Lokayukta Raid: ಬಿಲ್ ಪಾಸ್ ಮಾಡಲು ಗುತ್ತಿಗೆದಾರನಿಂದ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರಿನ ಬೋಂದೆಲ್ನಲ್ಲಿರುವ ಸಹಾಯಕ ಕಾರ್ಯಪಾಲ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ ಗುಣ ಭರವಸೆ ಉಪವಿಭಾಗದ ಇದರ ಕಿರಿಯ ಇಂಜಿನಿಯರ್-2 ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.

ಮಂಗಳೂರು ಬೋಂದೆಲ್ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರ್ -2 ಆಗಿರುವ ರೋನಾಲ್ಡ್ ಲೋಬೋ ಗುತ್ತಿಗೆದಾರರೊಬ್ಬರಿಂದ 20,000 ರೂ. ಲಂಚದ ಹಣ ಸ್ವೀಕಾರಿಸುತ್ತಿದ್ದ ವೇಳೆ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕಲಾವತಿ, ಇನ್ಸ್ಪೆಕ್ಟರ್ ಸುರೇಶ್ ಕುಮಾರ್, ಇನ್ಸ್ಪೆಕ್ಟರ್ ಅಮಾನುಲ್ಲಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
