
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯುವ ಕ್ರಿಕೆಟ್ ಪಂದ್ಯಗಳಿಗೆ ಆಗಾಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ವಿಸಿಟ್ ಕೊಟ್ಟು ತಮಗೂ ಕ್ರಿಕೆಟ್ ಕ್ರೇಜ್ ಇದೇ ಎಂಬುದನ್ನು ಸಾಬೀತು ಮಾಡಿದ್ದಾರೆ.
2023 ಐಪಿಎಲ್ ಟೂರ್ನಿ ವೇಳೆ ಆರ್ಸಿಬಿ ಮ್ಯಾಚ್ ವೀಕ್ಷಣೆ ಮಾಡಿದ್ದ ಸಿಎಂ, ಶುಕ್ರವಾರ (ಅ.20) ಕ್ರಿಕೆಟ್ ಅಭಿಮಾನಿಗಳೊಂದಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮ್ಯಾಚ್ ವೀಕ್ಷಣೆ ಮಾಡಿದ್ದಾರೆ. ಸಿಎಂ ಜೊತೆಗೆ ವಿಐಪಿ ವಿಂಗ್ನಲ್ಲಿ ಕುಳಿತು ಸಚಿವ ಬೈರತಿ ಸುರೇಶ್, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಕ್ರಿಕೆಟ್ ವೀಕ್ಷಣೆ ಮಾಡಿದ್ದಾರೆ.

2023 ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೆಂಗಳೂರಿನಲ್ಲಿ ಒಟ್ಟು 5 ಪಂದ್ಯಗಳು ನಿಗದಿಯಾಗಿದ್ದು, ಸದ್ಯ ಮೊದಲ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾ ತಂಡವ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದೆ. 368 ರನ್ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿರುವ ಪಾಕಿಸ್ತಾನ ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದರೂ 39ಓವರ್ಗಳಲ್ಲಿ 272 ರನ್ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ
