ಇಸ್ರೇಲ್ನ ದಾಳಿಯಿಂದ ಹಾನಿಗೊಳಗಾದ ಗಾಜಾಕ್ಕೆ ಭಾರತವು ಈಜಿಪ್ಟ್ನ ರಫಾ ಕ್ರಾಸಿಂಗ್ ಮೂಲಕ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದೆ. ಅದರಲ್ಲಿ ಅಗತ್ಯವಾದ ಔಷಧಿಗಳು, ಶಸ್ತ್ರ ಚಿಕಿತ್ಸೆಗೆ ಬೇಕಾದ ಸಾಮಗ್ರಿಗಳು, ಟೆಂಟ್ಗಳು, ಟಾರ್ಪಲಿನ್ ಇತರೆ ವಸ್ತುಗಳನ್ನು ಕಳುಹಿಸಿದೆ ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

ಹಮಾಸ್ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿತ್ತು. ಇದರಲ್ಲಿ 1500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಇದೀಗ ಇಸ್ರೇಲ್ ಗಾಜಾದ ಮೇಲೆ ದಾಳಿ ನಡೆಸುತ್ತಿದೆ.ನೂರಾರು ಮಕ್ಕಳನ್ನು ಕೊಂದು ಹಾಕಿದೆ.ಗಾಜಾದ ವೆಸ್ಟ್ ಬ್ಯಾಂಕ್ನ ಜೆನಿನ್ ನಗರದಲ್ಲಿರುವ ಅಲ್-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಹಮಾಸ್ ಹಾಗೂ ಇಸ್ಲಾಮಿಕ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ. ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ದಾಳಿ ಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು.
ಗಾಜಾ ನಗರದ ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಜಾದ ಕಡೆಗೆ ವಲಸೆ ಹೋಗುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಹಮಾಸ್ ಇಬ್ಬರು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.