Ashraf Kammaje
Updated on:Oct 30, 2023 | 9:00 AM

Karnataka Breaking Kannada News Live: ಕರ್ನಾಟಕದ ಹಲವೆಡೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
Karnataka Breaking News Live: ಹಾವೇರಿ RFO ಪರಮೇಶಪ್ಪಗೆ ಸೇರಿದ ಹಲವೆಡೆ ಲೋಕಾ ದಾಳಿ
ಹಾವೇರಿ: RFO ಪರಮೇಶಪ್ಪ ಮೂವರು ಪತ್ನಿಯರ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಹಾವೇರಿಯ ವರದಾನೇಶ್ವರಿ ಪಾರ್ಕ್ ಬಳಿಯ ಎರಡು ಮನೆಗಳು, ಶಿವಾಜಿನಗರದ ಮನೆ, ಕುರುಬಗೊಂಡದ ಮನೆ ಮತ್ತು ಹೆಡಿಗೊಂಡ ಗ್ರಾಮದ ಬಳಿ ಇರುವ ಫಾರ್ಮ್ಹೌಸ್ ಮೇಲೂ ದಾಳಿ ಮಾಡಲಾಗಿದೆ.

ಬೆಳಗಾವಿಯಲ್ಲಿ ಎಇಇ M.S.ಬಿರಾದಾರ ಮನೆ ಮೇಲೆ ಲೋಕಾ ದಾಳಿ
ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ M.S.ಬಿರಾದಾರ ಮನೆ ಮೇಲೆ ಲೋಕಾ ದಾಳಿ ಮಾಡಿದೆ. ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂರ್ಟ್ನಲ್ಲಿ ಇರುವ ನಿವಾಸದ ಮೇಲೆ ದಾಳಿ ಮಾಡಿದ್ದು, ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.

- ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ರಾಜ್ಯದಲ್ಲಿ ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಏಕಕಾಲದಲ್ಲಿ 90 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರ್ನಾಟಕದ ಹಲವೆಡೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ರಾಜ್ಯದಲ್ಲಿ ಏಕಕಾಲದಲ್ಲಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ
