
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿಯಾಗಿವೆ.

ಉಡುಪಿ, (ನವೆಂಬರ್ 13): ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ್ದ ಬೋಟ್ನಲ್ಲಿ ಬೆಂಕಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, ಏಳು ಹಡಗುಗಳು ಬೆಂಕಿಗಾಹುತಿಯಾಗಿವೆ. ದೀಪಾವಳಿ ಪ್ರಯುಕ್ತ ಇಂದು ಗಂಗೊಳ್ಳಿ ಬಂದರಿನಲ್ಲಿ(gangolli port) ಪೂಜೆ ನಡೆಯುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿದು ಕೂಡಲೇ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದ್ದು, ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದ್ರೆಮ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
