
ಹೈದರಾಬಾದ್: ನಾಲ್ಕು ರಾಜ್ಯಗಳ ಚುನಾವಣಾ ಮತ ಎಣಿಕೆ (Election Counting) ಬೆಳಗ್ಗೆ 8 ಗಂಟೆಯಿಂದ ಶುರುವಾಗಿದ್ದು, ತೆಲಂಗಾಣ, ಛತ್ತಿಸ್‌ಗಡದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಬೆಳಗ್ಗೆ 9:15ರ ವೇಳೆಗೆ ತೆಲಂಗಾಣದಲ್ಲಿ ಕಾಂಗ್ರೆಸ್ 62, ಬಿಆರ್‌ಎಸ್ 36, ಬಿಜೆಪಿ 3, ಇತರೇ 6 ಸ್ಥಾನಗಳಿದ್ದರೆ, ಛತ್ತಿಸ್‌ಗಡದಲ್ಲಿ ಬಿಜೆಪಿ 30, ಕಾಂಗೆಸ್ 49, ಇತರೇ 1 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ

ತೆಲಂಗಾಣದಲ್ಲಿ 119 ಹಾಗೂ ಛತ್ತಿಸ್‌ಗಡದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ತೆಲಂಗಾಣದಲ್ಲಿ ಬಹುಮತಕ್ಕೆ 100 ಸ್ಥಾನಗಳು ಹಾಗೂ ಛತ್ತಿಸ್‌ಗಡದಲ್ಲಿ 46 ಸ್ಥಾನಗಳ ಅಗತ್ಯವಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗ್ಯಾರಂಟಿಗಳು ಪ್ರಮುಖ ಪಾತ್ರ ವಹಿಸಿದ್ದವು. ಇದೇ ಗ್ಯಾರಂಟಿ ತಂತ್ರವನ್ನು ತೆಲಂಗಾಣದಲ್ಲಿಯೂ ಅನುಸರಿಸಲಾಗಿತ್ತು. ಕರ್ನಾಟಕದ ಪ್ರಮುಖ ನಾಯಕರು ತೆಲಂಗಾಣದಲ್ಲಿ ಪ್ರಚಾರ ನಡೆಸಿದ್ದರು.
ತೆಲಂಗಾಣದಲ್ಲಿ ಕಾಂಗ್ರೆಸ್‍ನಲ್ಲಿ ಆರು ಗ್ಯಾರಂಟಿ..!
* ಗ್ಯಾರಂಟಿ 1 – ಪ್ರತಿ ತಿಂಗಳು ಅತ್ತೆಗೆ 4,000 ರೂ. – ಸೊಸೆಗೆ 2,500 ರೂ.
* ಗ್ಯಾರಂಟಿ 2 – ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ)
* ಗ್ಯಾರಂಟಿ 3 – ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ
* ಗ್ಯಾರಂಟಿ 4 – 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್
* ಗ್ಯಾರಂಟಿ 5 – ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು
* ಗ್ಯಾರಂಟಿ 6 – ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್

ಎಲ್ಲಿ ಎಷ್ಟು ಮ್ಯಾಜಿಕ್ ನಂಬರ್?
ಮಧ್ಯಪ್ರದೇಶ: ಒಟ್ಟು ಸ್ಥಾನ- 230, ಸರಳ ಬಹುಮತಕ್ಕೆ-116, ರಾಜಸ್ಥಾನ: ಒಟ್ಟು ಸ್ಥಾನ- 199, ಸರಳ ಬಹುಮತಕ್ಕೆ-100, ಛತ್ತೀಸ್ ಗಡ: ಒಟ್ಟು ಸ್ಥಾನ- 90, ಸರಳ ಬಹುಮತಕ್ಕೆ-46, ತೆಲಂಗಾಣ- ಒಟ್ಟು ಸ್ಥಾನ-119, ಸರಳ ಬಹುಮತಕ್ಕೆ-60.