
ಸಂಸತ್ನಲ್ಲಿನ ಭದ್ರತಾ ಲೋಪದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅವರನ್ನು ಅಮಾನತಿನಲ್ಲಿರಿಸಲಾಗುತ್ತದೆ.

ಸಂಸತ್ನಲ್ಲಿನ ಭದ್ರತಾ ಲೋಪದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್(Derek O’brien)ರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅವರನ್ನು ಅಮಾನತಿನಲ್ಲಿರಿಸಲಾಗುತ್ತದೆ. ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿವೆ. ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಸದಸ್ಯರು ಗದ್ದಲ ಸೃಷ್ಟಿಸುತ್ತಿದ್ದು, ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ. ಇದೇ ವೇಳೆ ರಾಜ್ಯಸಭಾ ಸಂಸದ ಡೆರೆಕ್ ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.
