
ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣ ಸಂಬಂಧಿಸಿದಂತೆ ಸಂಸದ ಕೆ ಸಿ ವೇಣುಗೋಪಾಲ್ ಮಾತನಾಡಿದ್ದಾರೆ. ಇದೊಂದು ಭಯೋತ್ಪಾದಕ ದಾಳಿ ಅಂತ ದೆಹಲಿ ಪೊಲೀಸರೇ ಹೇಳುತ್ತಿದ್ದಾರೆ ಎಂದಿದ್ದಾರೆ.
ಬಿಜೆಪಿಯವರು ಈ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡ್ತಿದೆ ಅಂತ ಹೇಳ್ತಿದ್ದಾರೆ. ಆದ್ರೆ ನಾವು ಈ ವಿಚಾರದಲ್ಲಿ ರಾಜಕೀಯ ಮಾಡೋಲ್ಲ. ದೆಹಲಿ ಪೊಲೀಸರು ಇದೊಂದು ಭಯೋತ್ಪಾದಕ ದಾಳಿ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು, ದೆಹಲಿ ಪೊಲೀಸರು ಭಾರತದ ಗೃಹ ಸಚಿವಾಲಯದ ಅಡಿಯಲ್ಲೇ ಬರುವುದು. ನಾವು ರಾಜಕೀಯ ಮಾಡಿಲ್ಲ, ಮಾಡೋಲ್ಲ. ಸರ್ಕಾರದ ಕಡೆಯಿಂದ ಗಂಭೀರ ಭದ್ರತಾ ಲೋಪವಾಗಿದೆ ಎಂದು ನಾವು ಹೇಳಿದ್ದೇವೆ ಅಷ್ಟೇ ಎಂದು ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.
