
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿರೋಧ ಪಕ್ಷದ 31 ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಿರುವುದಾಗಿ ಲೋಕಸಸಭಾ ಸ್ಪೀಕರ್ ಹೇಳಿದ್ದಾರೆ

ದೆಹಲಿ ಡಿಸೆಂಬರ್ 18: ಲೋಕಸಭೆಯಲ್ಲಿ(Lok sabha) ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಸೇರಿದಂತೆ 31 ವಿಪಕ್ಷ ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಸದನದಿಂದ ಅಮಾನತುಗೊಳಿಸಲಾಗಿದೆ. ಲೋಕಸಭೆ ಭದ್ರತಾ ಲೋಪದ (Lok Sabha security breach) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆಯ ವೇಳೆ ಸಂಸದರು ಸದನದೊಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
