
ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಾನೂನು ಬಾಹಿರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಅರ್ಜಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿಯವರನ್ನ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅತ್ತ, ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಜೆಡಿಎಸ್ ನಾಯಕರು ಫುಲ್ ಆ್ಯಕ್ಟೀವ್ ಆಗಿದ್ದು, ಸೀಟು ಹಂಚಿಕೆ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ.
