
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಬಸ್ಸಿನಲ್ಲಿ 40ರಿಂದ 50 ರಷ್ಟು ಪ್ರಯಾಣಿಕರು ಇದ್ದರು ಎಂದು ವರದಿಯಾಗಿದೆ.

ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿಯ ಸುಮಾರು 100 ಮೀ ಸಾಗುವಾಗಲೇ ಈ ಅವಘಡ ಸಂಭವಿಸಿದೆ. ಬಸ್ಸು ಕೈಕಂಬದಿಂದ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಸುಮಾರು 40ರಿಂದ 50ರಷ್ಟು ಪ್ರಯಾಣಿಕರಿದ್ದರು ಎಂದು ನಮಗೆ ಪ್ರಾಥಮಿಕವಾಗಿ ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಜೆಯ ವೇಳೆಗೆ ಈ ಅವಘಡ ಸಂಭವಿಸಿದೆ” ಎಂದು ತಿಳಿದು ಬಂದಿದೆ
ಘಟನೆಯಿಂದ ಸುಮಾರು 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಎಲ್ಲರನ್ನೂ ಮಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.