
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ (ಜ.18) ಹೇಳಿದ್ದಾರೆ.

ಅಯೋಧ್ಯೆ, ಜ.18: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ (ಜ.18) ಹೇಳಿದ್ದಾರೆ

ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರು, ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿದೆ. ಜನವರಿ 22ರಂದು ಮಧ್ಯಾಹ್ನ 2.30ರ ವರೆಗೆ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿ, ನೌಕರರಿಗೆ ರಜೆ ನೀಡಲಾಗಿದೆ.ಕೇಂದ್ರ ಸರ್ಕಾರ ಅಧೀನದಲ್ಲಿರುವ ಸರ್ಕಾರಿ ಕಚೇರಿಗಳು, ಅಧಿಕಾರಿಗಳು, ಸಂಸ್ಥೆಗಳಿಗೆ ಜನವರಿ 22ರಂದು ಅರ್ಧ ದಿನ ರಜೆ ಘೋಷಿಸಿದೆ. ಈ ಮೂಲಕ ಉದ್ಯೋಗಿಗಳು, ನೌಕರರು ರಾಮ ಮಂದಿರ ಉದ್ಘಾಟನೆ ಯಲ್ಲಿ ಭಾಗೀದಾರರಾಗಲು ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.