
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಕಾರ್ಯಾಚರಣೆ ನಡೆದಿದೆ. ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ ಸಾವರ್ಕರ್ ವೃತ್ತ ಮತ್ತು ಕೇಸರಿ ಧ್ವಜ ತೆರವುಗೊಳಿಸಲಾಗಿದೆ

ಬಿಜೆಪಿ ಮುಖಂಡರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದ್ ನಾಯ್ಕ್, ಸುಬ್ರಾಯ ದೇವಾಡಿಗ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸಾವರ್ಕರ್ ನಾಮಫಲಕ ಅಳವಡಿಕೆಗೆ ಒಪ್ಪಿಗೆ ನೀಡಲಾಗಿತ್ತು. ಈಗ ಗ್ರಾಮ ಪಂಚಾಯಿತಿ ಪಿಡಿಒ ಏಕಾಏಕಿ ಜೆಸಿಬಿ ಮೂಲಕ ನಾಮಫಲಕ ತೆರವುಗೊಳಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು
