
ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕಿಡಿಗೇಡಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ.

ಹುಬ್ಬಳ್ಳಿ, ಜ.31: ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ಬರ್ಬರ ಹತ್ಯೆ (Murder) ನಡೆದಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಭೀಕರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
