
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ(ಫೆಬ್ರವರಿ 17) ಮಂಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್ ಸಮಾವೇಶ ಹಾಗೂ ಕಂಬಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.

ಮಂಗಳೂರು, (ಫೆವ್ರವರಿ 16): ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah ) ನಾಳೆ(ಫೆಬ್ರವರಿ 17) ಮಂಗಳೂರಿನಲ್ಲಿ (Mangaluru) ಎರಡೂ ಕಾರ್ಯಕ್ರಮಗಳಲ್ಲಿ ಭಾವಹಿಸಲಿದ್ದು, ಈ ಕಾರ್ಯಕ್ರಮಗಳಲ್ಲಿ ಡ್ರೋನ್ ಹಾರಾಟ (Drone camera) ನಿಷೇಧಿಸಲಾಗಿದೆ. ವಾಮಂಜೂರಿನ ತಿರುವೈಲ್ನಲ್ಲಿ ಕಂಬಳದಲ್ಲಿ ಕಾರ್ಯಕ್ರಮ ಹಾಗೂ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶ

ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರುವೈಲ್ನಲ್ಲಿ ನಡೆಯುವ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಸಂಜೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.

ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದ ಸುತ್ತಮುತ್ತ ತಾತ್ಕಾಲಿಕವಾಗಿ ರೆಡ್ಝೋನ್ ಎಂದು ಪರಿಗಣಿಸಿ 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶದಲ್ಲಿ ತಿಳಿಸಿದ್ದಾರೆ.

