
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷದ ಸಮಾವೇಶವು ತೊಕ್ಕೊಟ್ಟು ವಿನ ಯೂನಿಟಿ ಹಾಲ್ ನಲ್ಲಿ ಇಂದು ನಡೆಯಲಿದೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯಕಾರ್ಯದರ್ಶಿ ಉಬೈದ್ ಬೋಳಿಯಾರ್ ತಿಳಿಸಿದರು

ಈ ಸಮಾವೇಶಕ್ಕೆ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ , ವಿಮೆನ್ ಇಂಡಿಯಾ ಮೂವ್ಮೆಂಟ್ ನ ರಾಷ್ಟ್ರೀಯ ಸಮೀತಿ ಸದಸ್ಯರಾದ ಶಾಹಿದ ತಸ್ನಿಮ್ , ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯರಾದ ನವಾಝ್ ಉಳ್ಳಾಲ್ , ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು, ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನೌರಿನ್ ಅಲಂಪಾಡಿ, ಎಸ್ ಡಿ ಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಮತ್ತು ಸ್ಥಳೀಯ ಚುನಾಯಿತ ಜನ ಪ್ರತನಿಧಿಗಳು ಹಾಗೂ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದ ನಾಯಕರು ಭಾಗವಹಿಸಲಿದ್ದಾರೆ
