
ಬೆಂಗಳೂರು: ವಿಧಾನಸಭೆಯಲ್ಲಿ ನಜೀರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ಕುರಿತಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದಾರೆ. ನಾನು ನಿನ್ನೆಯಿಂದ 10 ಬಾರಿ ಕೇಳಿಸಿಕೊಂಡಿದ್ದೇನೆ. ಇವತ್ತು ಕೂಡ ಕೇಳಿಸಿಕೊಂಡಿದ್ದೇನೆ. ನಜೀರ್ ಸಾಬ್ ಜಿಂದಾಬಾದ್ ಅಂತಾನೆ ಹೇಳಿರೋದು ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪಾಕಿಸ್ತಾನ ಜಿಂದಾಬಾದ್ ಅಂತಲ್ಲ. ಅದನ್ನ ತಿರುಚುವ ಕೆಲಸ ಮಾಡಬಾರದು. ಎಲ್ಲರಿಗೂ ಕಿವಿ- ಕಣ್ಣು ಇದೆ ಅಲ್ವಾ? ಎಂದು ಹೇಳಿದ್ದಾರೆ
