
ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ್ದ ಕಾಂಗ್ರೆಸ್ನ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಂಡಿದ್ದಾರೆ, ಬಂಡಾಯ ಶಾಸಕರ ಸದಸ್ಯತ್ವವನ್ನು ರದ್ದುಗೊಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ನ ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, 6 ಶಾಸಕರ ಸದಸ್ಯತ್ವವನ್ನು ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ರದ್ದುಗೊಳಿಸಿದ್ದಾರೆ. ಕಾಂಗ್ರೆಸ್ ಶಾಸಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹರ್ಷವರ್ಧನ್ ಚೌಹಾಣ್ ಪಕ್ಷಾಂತರ ನಿಷೇಧ ಕಾಯ್ದೆಯಡಿ ಆರು ಮಂದಿಯನ್ನು ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.
