
ಹಾಸನ: ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿದೆ. ಪರಿಣಾಮ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದೆ.
ಶಿರಾಡಿಘಾಟ್ ರಸ್ತೆ ಎನ್‌ಎಚ್-75 ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಮಗುಚಿಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಪರಿಶೀಲಿಸಿದ್ದಾರೆ.


ಬೆಂಗಳೂರು-ಹಾಸನ-ಮಂಗಳೂರಿಗೆ ಹಾದು ಹೋಗುವ ರಸ್ತೆ ಇದಾಗಿದ್ದು, ಅತ್ತ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತ ಮಾಡಲಾಗಿದೆ. ಹೀಗಾಗಿ ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸುತ್ತಿದ್ದಾರೆ.
