
ECI Press Conference Live Updates: ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ: ರಾಜೀವ್ ಕುಮಾರ್
ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ.

ECI Press Conference Live Updates: 12 ರಾಜ್ಯಗಳಲ್ಲಿ ಮಹಿಳಾ ಮತದಾರರು ಹೆಚ್ಚು: ರಾಜೀವ್ ಕುಮಾರ್
12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು

ECI Press Conference Live Updates: ಮೊದಲ ಬಾರಿ ಮತಚಲಾವಣೆ ಮಾಡಲಿದ್ದಾರೆ 1.8 ಕೋಟಿ ಮತದಾರರು
ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ ಎಂದು ಹೇಳಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ECI Press Conference Live Updates: ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧ: ಮುಖ್ಯ ಚುನಾವಣಾ ಆಯುಕ್ತ
ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.