
ಮಂಡ್ಯ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ. ಮಂಡ್ಯದ ಮದ್ದೂರಿನ ನಿಡಘಟ್ಟ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ 99 ಲಕ್ಷದ 20 ಸಾವಿರ ಹಣವನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

KA 54 N 4030 ಸಂಖ್ಯೆಯ ಕ್ರೇಟಾ ಕಾರಿನಲ್ಲಿ ಈ ಹಣವನ್ನು ಸಾಗಿಸುತ್ತಿದ್ದರು. ಕೆಆರ್ ಪೇಟೆ ಮೂಲಕ ಅಡಿಕೆ ವ್ಯಾಪಾರಿಗೆ ಸೇರಿದ ನಗದು ಇದಾಗಿದೆ. ಸದ್ಯ ಸೂಕ್ತ ದಾಖಲೆ ಒದಗಿಸದ ಹಿನ್ನೆಲೆ ಹಣವನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ದೇಶದಲ್ಲಿ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗಿದೆ. ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 19 ಹಾಗೂ ಮೇ 7 ರಂದು ಚುನಾವಣೆ ನಡೆಯಲಿದೆ.

ರಾಜ್ಯದಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದಾರೆ. ಅಂತೆಯೇ ಮಂಡ್ಯದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 99.20 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ.

