
ಬೆಂಗಳೂರಿನ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಕೋರಮಂಗಲದಲ್ಲಿರುವ ಕಚೇರಿ, ಇಂದಿರಾನಗರ, ಜಯನಗರ ಸೇರಿ ಹಲವೆಡೆ ದಾಳಿ ಮಾಡಿದ್ದಾರೆ.
ಮೇಘನಾ ಫುಡ್ಸ್ ಕಂಪನಿ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಹೊಂದಿದೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ಬೆಳಗ್ಗೆ ಐದು ಘಂಟೆಯಿಂದ ದಾಳಿ ಮಾಡಿ ಶೋಧಕಾರ್ಯ ನಡೆಸ್ತಿದ್ದಾರೆ.

ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ. ವರದಿಗಳ ಪ್ರಕಾರ ನಗರದಲ್ಲಿ ಸುಮಾರು ಹತ್ತಕ್ಕು ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.


