
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಮತ್ತೆ ಕಮಲವನ್ನು ಅಪ್ಪಿಕೊಂಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ಸೇರ್ಪಡೆಗೊಂಡರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ಕೊಟ್ಟು, ಶಾಲು ಹಾಕುವ ಮೂಲಕ ಜನಾರ್ದನ ರೆಡ್ಡಿಯವರನ್ನ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದರು. ಇದೇ ವೇಳೆ ರೆಡ್ಡಿಯವರ ಪತ್ನಿ ಅರುಣಾ ಲಕ್ಷ್ಮಿ ಕೂಡ ಸೇರ್ಪಡೆಗೊಂಡರು. ಈ ಮೂಲಕ ಜನಾರ್ದನ ರೆಡ್ಡಿಯವರು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿದರು. ರೆಡ್ಡಿಯವರು ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಕೂಡ ಆಗಮಿಸಿದ್ದರು.
