
ಮಂಗಳೂರು : ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ 9:30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.
ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ನಡೆದ ಮೆರವಣಿಗೆಗೆ ಚಾಲನೆ ನೀಡಿದರು. ತೆರದ ವಾಹನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇದ್ದು, ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುವುದರ ಜೊತೆಗೆ ಗೊಂಬೆ ಬಳಗ, ಚೆಂಡೆ, ಕೊಂಬು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಧ್ವಜದೊಂದಿಗೆ ಹೆಜ್ಜೆ ಹಾಕಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಅಶೋಕ್ ಕುಮಾರ್ ರೈ, ಮಾಜಿ ಸಚಿವ ಜೆ.ಆರ್.ಲೋಬೊ ಮತ್ತಿತರರು ಉಪಸ್ಥಿತರಿದ್ದರು.





