
ಬೆಂಗಳೂರು: ಹೈಕೋರ್ಟ್ ಹಾಲ್‌ನಲ್ಲಿ ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿ ಹಂಗಾಮ ಸೃಷ್ಟಿಸಿದ ಘಟನೆ ನಡೆದಿದೆ. ಮುಖ್ಯ ವಿಭಾಗೀಯ ಪೀಠದಲ್ಲಿ ವ್ಯಕ್ತಿಯೊಬ್ಬ ರೇಜರ್ ಬ್ಲೇಡ್‌ನಿಂದ ಕುತ್ತಿಗೆ ಕೊಯ್ದುಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಆ ವ್ಯಕ್ತಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲು ನ್ಯಾಯ ಪೀಠ ಸೂಚನೆ ನೀಡಿದೆ.
ಹೈಕೋರ್ಟ್ ಹಾಲ್‌ನಲ್ಲಿ ತನಗೆ ನ್ಯಾಯ ಕೊಡಿ ಎಂದು ಕೂಗಾಡಿದ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಘಟನೆಗೆ ಬೇಸರ ವ್ಯಕ್ತಪಡಿಸಿರುವ ಜಡ್ಜ್, ಹೈಕೋರ್ಟ್ ಹಾಲ್‌ಗೆ ಆ ವ್ಯಕ್ತಿ ರೇಜರ್ ಬ್ರೇಡ್ ಹೇಗೆ ಒಳಗೆ ತಂದ ಎಂದು ಪ್ರಶ್ನಿಸಿದೆ.

ಆತ್ಮಹತ್ಯೆ ಯತ್ನದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಕಲಾಪವನ್ನು ಮುಂದೂಡಿಕೆ ಮಾಡಿದ್ದು, ಗಾಯಾಳುವಿನ ಬಗ್ಗೆ ಮಾಹಿತಿ ನೀಡಲು ರಿಜಿಸ್ಟ್ರಾರ್ ಜನರಲ್‌ಗೆ ಸೂಚನೆ ನೀಡಿದೆ.

