
ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ಮಂದಿ ಬೆಚ್ಚಿಬಿದ್ದಿದ್ದಾರೆ.
ಗಂಗಾ ದೇವಿ ಕೊಲೆ ಮಾಡಿದ ಆರೋಪಿ. 9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಹೊತ್ತಿದ್ದಾಳೆ. ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಗಂಗಾದೇವಿಯೇ ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾಳೆ.


ಇಬ್ಬರು ಮಕ್ಕಳನ್ನ ಕೊಲೆ ಮಾಡಿ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಗಂಗಾದೇವಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ಈಗ ನಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಫೋನ್ನಲ್ಲಿ ಹೇಳಿದ್ದಾರೆ. ಕೂಡಲೇ ಅಲರ್ಟ್ ಆಗಿರುವ ಕಂಟ್ರೋಲ್ ರೂಮ್, ಸ್ಥಳಕ್ಕೆ ಹೊಯ್ಸಳ ಟೀಂ ಕಳುಹಿಸಿದೆ. ಪರಿಶೀಲನೆ ಮಾಡಿ ಗಂಗಾದೇವಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗಂಗಾದೇವಿ ಮೂಲತಃ ಆಂಧ್ರ ಮೂಲದವಳು. ಕೊಲೆ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್ನಲ್ಲಿ ಜೈಲು ಪಾಲಾಗಿದ್ದಾನೆ. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದಳು


