
ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘತಕ್ಕೆ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು, ಮೇ 27: ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ಹೆಚ್ಚುತ್ತಿವೆ. ಸಂಚಾರಿ ನಿಯಮಗಳನ್ನು ಪಾಲಿಸಿ, ಅತಿ ವೇಗದಿಂದ ವಾಹನ ಚಲಾಯಿಸದಿರಿ ಎಂದು ಟ್ರಾಫಿಕ್ ಪೊಲೀಸರು (Traffic Police) ಅರಿವು ಮೂಡಿಸುತ್ತಿದ್ದರೂ, ಕೆಲ ಸವಾರರು ಮಾತ್ರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿ ಜೀವ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘತಕ್ಕೆ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಬಗ್ಗೆ ಟ್ವೀಟ್ ಮಾಡಿದ ಅವರು, “ಭಾನುವಾರ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 51 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪೈಕಿ ಹಲವು ಪ್ರಕರಣಗಳು ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿದೆ. ರಸ್ತೆ ಸುರಕ್ಷತೆಗೆ ಎಲ್ಲ ಪಾಲುದಾರರಿಂದ ಜವಾಬ್ದಾರಿಯುತ ನಡವಳಿಕೆಯ ಅಗತ್ಯವಿದೆ” ಎಂದರು
