
ಕಾಪು: ದ್ವಿಚಕ್ರ ವಾಹನ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿಯತ್ತ ಸಹ ಸವಾರರೊಂದಿಗೆ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕ್ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಪಣಿಯೂರು ಕ್ರಾಸ್ ಬಳಿ ವೇಗ ತಡೆಗೆ ಇರಿಸಲಾದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಿಲ್ಲ