
ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವ ಸಾಧ್ಯತೆ ಇದ್ದು ಈ ಕುರಿತು ಚಿತ್ರರಂಗದ ಹಲವರು ಸಭೆ ನಡೆಸಲಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ದರ್ಶನ್ ಅಂಡ್ ಗ್ಯಾಂಗ್ ಕಿಡ್ನಾಪ್ ಮಾಡಿ ಕರೆತಂದು ಕಾಮಾಕ್ಷಿಪಾಳ್ಯದ ಬಳಿಯ ಕಾರ್ ಶೆಡ್ನಲ್ಲಿ ಇರಿಸಿ ಥಳಿಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ವದರಿಯಾಗುತ್ತಿದ್ದಂತೆ ರಾಜ್ಯಾದ್ಯಂತ ದರ್ಶನ್ ವಿರುದ್ದ ಆಕ್ರೋಶ ಕೇಳಿಬಂದಿದೆ. ಈ ಹಿನ್ನೆಲೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ನಟ ದರ್ಶನನ್ನು ಚಿತ್ರರಂಗದಿಂದ ಬ್ಯಾನ್ ಮಾಡುವ ಸಾಧ್ಯತೆ ಇದ್ದು ಈ ಕುರಿತ ಮಹತ್ವದ ಸಭೆಯನ್ನು ಇಂದು ಸಂಜೆ 4 ಗಂಟೆಗೆ ನಡೆಸಲು ತೀರ್ಮಾನಿಸಲಾಗಿದೆ.

ಕನ್ನಡದ ಹಿರಿಯ ನಟ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ ಸೇರಿದಂತೆ ಹಲವು ನಟ ನಟಿಯರು ಇಂದು ಸಂಜೆ ನಡೆಯಲಿರುವ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
