Suraj Revanna Case: ಸೂರಜ್‌ಗೆ ಮೊದಲ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಸೂರಜ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ನಡುವೆ ಸಿಐಡಿ ಕಚೇರಿಯಲ್ಲಿ ಮತ್ತೊಬ್ಬ ಸಂತ್ರಸ್ತನಿಂದ ಇಂದು ಕೇಸ್ ದಾಖಲು ಸಾಧ್ಯತೆ ಇದೆ. ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗುತ್ತಿದೆ.
ಬೆಂಗಳೂರು: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Homosexuality, abnormal sexual assault, physical abuse) ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣಗೆ (Suraj Revanna Case) ಮತ್ತೊಂದು ಸಂಕಷ್ಟ ಎದುರಾಗುತ್ತಿದೆ. ಇಂದು ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಂತಹದೇ ಕೇಸ್ ದಾಖಲು ಮಾಡುವ ಸಾಧ್ಯತೆ ಇದೆ.

ಸೂರಜ್‌ಗೆ ಮೊದಲ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಸೂರಜ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ಈ ನಡುವೆ ಸಿಐಡಿ ಕಚೇರಿಯಲ್ಲಿ ಮತ್ತೊಬ್ಬ ಸಂತ್ರಸ್ತನಿಂದ ಇಂದು ಕೇಸ್ ದಾಖಲು ಸಾಧ್ಯತೆ ಇದೆ. ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗುತ್ತಿದೆ.

ಸಲಿಂಗ ಕಾಮ ಪ್ರಕರಣದಲ್ಲಿ ಜೈಲುಪಾಲಾಗಿರುವ ಸೂರಜ್ ರೇವಣ್ಣನನ್ನು ಕಳೆದ ರಾತ್ರಿ ಎಂಟು ಗಂಟೆಯ ಸುಮಾರಿಗೆ ಪೊಲೀಸರು ಕಂರೆತಂದಿದ್ದು, ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಬ್ಯಾರಕ್‌ಗೆ ಶಿಫ್ಟ್ ಮಾಡಿದ್ದಾರೆ. ಕ್ವಾರಂಟೈನ್ ಸೆಲ್‌ನಲ್ಲಿ ಸೆರೆವಾಸ ಅನುಭವಿಸುತ್ತಿರುವ ಸೂರಜ್ ರೇವಣ್ಣಗೆ ಎಲ್ಲ ಕೈದಿಗಳಿಗೆ ನೀಡುವ ಊಟವನ್ನು ಸಿಬ್ಬಂದಿ ನೀಡಿದ್ದರು.

ರಾತ್ರಿ ಸೂರಜ್ ರೇವಣ್ಣನನ್ನು ಪೊಲೀಸರು ಜೈಲಿಗೆ ತಡವಾಗಿ ಕರೆತಂದ ಹಿನ್ನೆಲೆಯಲ್ಲಿ, ಬೆಳಿಗ್ಗೆ 10 ಗಂಟೆಯ ಬಳಿಕ ಸೂರಜ್‌ಗೆ ವಿಚಾರಣಾಧೀನ ಕೈದಿ ನಂಬರ್ ಕೊಡಲಾಗುತ್ತದೆ. ಮಧ್ಯಾಹ್ನ ಅಥವಾ ಸಂಜೆ ವೇಳೆ ಬಾಡಿ ವಾರಂಟ್ ಮೇಲೆ ಮತ್ತೆ ಸಿಐಡಿ ಕಸ್ಟಡಿಗೆ ನೀಡಲಾಗುತ್ತದೆ. ಸೂರಜ್‌ನನ್ನು ಸಿಐಡಿ ಕಸ್ಟಡಿಗೆ ಪಡೆದು ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ
