vs ZIM: ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ 13 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಜಿಂಬಾಬ್ವೆ ನೀಡಿದ 116 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 20ನೇ ಓವರ್ನ 5ನೇ ಎಸೆತದಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 102 ರನ್ಗಳಿಸಲಷ್ಟೇ ಶಕ್ತವಾಯಿತು

ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಯುವ ಪಡೆ 13 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಜಿಂಬಾಬ್ವೆ ನೀಡಿದ 116 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 20ನೇ ಓವರ್ನ 5ನೇ ಎಸೆತದಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 102 ರನ್ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಆತಿಥೇಯ ಜಿಂಬಾಬ್ವೆ 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಸೋಲಿಗೆ ಐಪಿಎಲ್ ಸ್ಟಾರ್ಗಳ ಅತಿಯಾದ ಆತ್ಮವಿಶ್ವಾಸವೇ ಪ್ರಮುಖ ಕಾರಣ ಎಂದರೆ ತಪ್ಪಾಗಲಾರದು. ತವರು ಪಿಚ್ನಲ್ಲಿ ಜಿಂಬಾಬ್ವೆ ತಂಡದ ಬೌಲಿಂಗ್ ದಾಳಿಯನ್ನು ಕಡೆಗಣಿಸಿದ ಭಾರತದ ಬ್ಯಾಟರ್ಗಳು ಬಂದಬಂದವರೇ ಬಿಗ್ ಶಾಟ್ ಆಡಲು ಯತ್ನಿಸಿ ಸುಲಭವಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಹಾಗೂ ಆವೇಶ್ ಖಾನ್ ಗೆಲುವಿಗಾಗಿ ಹೋರಾಟ ನೀಡದಿದ್ದರೆ, ಶುಭ್ಮನ್ ಗಿಲ್ ಪಡೆ ಇನ್ನು ಹೀನಾಯವಾಗಿ ಸೋಲುತಿತ್ತು.

115 ರನ್ ಕಲೆಹಾಕಿದ ಜಿಂಬಾಬ್ವೆ
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಬೌಲರ್‌ಗಳು ಕೂಡ ಉತ್ತಮ ಪ್ರದರ್ಶನ ನೀಡಿ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಲಷ್ಟೇ ಶಕ್ತವಾಯಿತು. ಜಿಂಬಾಬ್ವೆ ಪರ ಕ್ಲೈವ್ ಮದಾಂಡೆ ಅಜೇಯ 29 ರನ್ ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಕೊಡುಗೆ ನೀಡಿದರು. ಉಳಿದಂತೆ ಡಿಯೋನ್ ಮೈಯರ್ಸ್ 23 ರನ್ ಕೊಡುಗೆ ನೀಡಿದರೆ, ಬ್ರಿಯಾನ್ ಜಾನ್ ಬೆನೆಟ್ ಕೂಡ 15 ಎಸೆತಗಳಲ್ಲಿ 22 ರನ್ ಬಾರಿಸಿದರು. ಮತ್ತೊಂದೆಡೆ ರವಿ ಬಿಷ್ಣೋಯ್ ಟೀಂ ಇಂಡಿಯಾ ಪರ ಗರಿಷ್ಠ 4 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಹಾಗೂ ಮುಖೇಶ್ ಕುಮಾರ್, ಅವೇಶ್ ಖಾನ್ ತಲಾ 1 ವಿಕೆಟ್ ಪಡೆದರು.

ಟೀಂ ಇಂಡಿಯಾದ ಬ್ಯಾಟಿಂಗ್ ವಿಫಲ
ಈ ಗುರಿಗೆ ಉತ್ತರವಾಗಿ ಟೀಂ ಇಂಡಿಯಾದ ಬ್ಯಾಟಿಂಗ್ ಆರಂಭದಿಂದಲೇ ಕಳಪೆಯಾಗಿತ್ತು. ಪವರ್ ಪ್ಲೇನಲ್ಲಿಯೇ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡಿತು. ಹೀಗಾಗಿ ತಂಡದ ಈ ಆರಂಭಿಕ ಆಘಾತದಿಂದ ಯಾವುದೇ ಬ್ಯಾಟ್ಸ್‌ಮನ್ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದಾಗಿ 116 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡ ಕೇವಲ 102 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಪರ ನಾಯಕ ಶುಭ್ಮನ್ ಗಿಲ್ ಗರಿಷ್ಠ 31 ರನ್ ಬಾರಿಸಿದರು. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ 27 ರನ್ ಹಾಗೂ ಆವೇಶ್ ಖಾನ್ 16 ರನ್ ಬಾರಿಸಿ ತಂಡವನ್ನು ಮುಜುರದ ಸೋಲಿನಿಂದ ಪಾರು ಮಾಡಿದರು. ಇವರ ಹೊರತಾಗಿ ತಂಡದ ಯಾವುದೇ ಬ್ಯಾಟ್ಸ್ಮನ್ಗೆ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ. ಈ ಕಳಪೆ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಜಿಂಬಾಬ್ವೆ ವಿರುದ್ಧ ಮೂರನೇ ಸೋಲು ಅನುಭವಿಸಿತು.

