ಕರ್ನಾಟಕದ ಹಲವೆಡೆ ಮುಂಗಾರು ಮಳೆ ಅಬ್ಬರ ಮುಂದುವರಿದೆ. ಅದರಲ್ಲೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಜನರನ್ನು ಹೊರಗೆ ಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇದರಿಂದ ಕೆಲವೆಡೆ ನದಿ, ಹಳ್ಳ-ಕೊಳ್ಳುಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ(ಜುಲೈ 16) ರಾಜ್ಯದ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

ಬೆಂಗಳೂರು, (ಜುಲೈ 15): ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಎಡಬಿಡದೇ ಸುರಿಯುತ್ತಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಇನ್ನು ರಾಜ್ಯದ ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ನಾಳೆ ರೆಡ್, ಆರೆಂಜ್, ಹೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಆರು ಜಿಲ್ಲೆಗಳಲ್ಲಿ ನಾಳೆ (ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


