ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಗ್ರಾಮದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವೀಟ್ ಮಾಡಿದ್ದು, ‘ಗಂಗಾವಳಿ ನದಿಯಲ್ಲಿ ಟ್ರಕ್ ಇರೋದು ಖಚಿತವಾಗಿದೆ ಎಂದಿದ್ದಾರೆ.

ಉತ್ತರ ಕನ್ನಡ, ಜು.24: ಭಾರೀ ಮಳೆಯಿಂದಾಗಿ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಈ ಪೈಕಿ ಕಾರ್ಯಾಚರಣೆ ಮೂಲಕ ಈವರೆಗೆ ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನು ಈ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಈಗ ಗುಡ್ಡದ ಮುಂಭಾಗದಲ್ಲಿರುವ ಗಂಗಾವಳಿಯಲ್ಲಿರುವುದು ಪತ್ತೆಯಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ದುರಂತ ಸಂಭವಿಸಿದ ಎಂಟು ದಿನಗಳು ಕಳೆದ ಬಳಿಕ ಟ್ರಕ್ ಪತ್ತೆಯಾಗಿದ್ದು, ಕಾರ್ಯಚರಣೆ ತೀವ್ರಗೊಂಡಿದೆ. ಆದ್ರೆ, ಚಾಲಕ ಅರ್ಜುನ್ ಟ್ರಕ್ನಲ್ಲಿ ಸಿಲುಕಿಕೊಂಡಿದ್ದಾರಾ ಅಥವಾ ನದಿಯಲ್ಲಿ ಕೊಚ್ಚಿ ಹೋಗಿದ್ದಾರಾ ಎನ್ನುವುದು ಇನ್ನು ತಿಳಿದುಬಂದಿಲ್ಲ. ಸದ್ಯಕ್ಕೆ ನದಿಯಿಂದ ಟ್ರಕ್ ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.

ಸ್ಥಳಕ್ಕೆ ಧಾವಿಸಿದ ಡಿಸಿ ಲಕ್ಷ್ಮೀಪ್ರಿಯಾ ಹಾಗೂ ಎಸ್ಪಿ ನಾರಾಯಣ
ಇಂದು(ಬುಧವಾರ) ಗಂಗಾವಳಿ ನದಿಯಲ್ಲಿ ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ಫೋಕ್ಲೇನ್ ಬಕೆಟ್ಗೆ ಕಬ್ಬಿಣ ಬಡಿದಿದೆ. ಈ ಹಿನ್ನಲೆ ನದಿಯಲ್ಲಿ ವಾಹನ ಒಂದು ಇರುವುದು ಖಚಿತ ಆಗುತ್ತಿದ್ದಂತೆ, ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಾಗೂ ಎಸ್ಪಿ ನಾರಾಯಣ ಧಾವಿಸಿದ್ದಾರೆ. ಇದೀಗ ಕಾರ್ಯಾಚರಣೆ ತಿವ್ರಗೊಂಡಿದ್ದು, ಆ ವಾಹನ ಲಾರಿನಾ ಎಂಬ ಪ್ರಶ್ನೆ ಮುಡುತ್ತಿದೆ.
