ಬೆಳ್ತಂಗಡಿ: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ಆ.20ರ ಮಂಗಳವಾರ ನಡೆದಿದೆ.ಎಸ್.ಪಿ.ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ.

ಮಂಗಳವಾರ ಮಧ್ಯಾಹ್ನದ ಬಳಿಕ ಈ ಘಟನೆ ಸಂಭವಿಸಿದ್ದು, ಕೊಲೆಗಾರರು ಯಾರು ? ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ.ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ


