Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಮಹಿಳೆಯರು ಮನೆಯಲ್ಲಿಯೇ ಇರಬೇಕು ಎಂಬುದು ಆರ್​ಎಸ್​ಎಸ್ ನಂಬಿಕೆ; ಅಮೆರಿಕದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

editor tv by editor tv
September 9, 2024
in ರಾಷ್ಟ್ರೀಯ
0
ಮಹಿಳೆಯರು ಮನೆಯಲ್ಲಿಯೇ ಇರಬೇಕು ಎಂಬುದು ಆರ್​ಎಸ್​ಎಸ್ ನಂಬಿಕೆ; ಅಮೆರಿಕದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
1.9k
VIEWS
Share on FacebookShare on TwitterShare on Whatsapp

ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಡಲ್ಲಾಸ್‌ನಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಮಾತನಾಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಾಷಿಂಗ್ಟನ್: ಅಮೆರಿಕದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ಭಾರತವನ್ನು ಒಂದು ಕಲ್ಪನೆ ಎಂದು ನಂಬುತ್ತದೆ, ಆದರೆ ಕಾಂಗ್ರೆಸ್ ಅದನ್ನು ಬಹುವಿಧದ ಕಲ್ಪನೆ ಎಂದು ಪರಿಗಣಿಸುತ್ತದೆ ಎಂದಿದ್ದಾರೆ. ಈ ವೇಳೆ, ಭಾರತದಲ್ಲಿ ನಿರುದ್ಯೋಗದ ಬಗ್ಗೆಯೂ ರಾಹುಲ್ ಗಾಂಧಿ ಮಾತನಾಡಿದ್ದಾರೆ ಮತ್ತು ಚೀನಾದೊಂದಿಗೆ ಭಾರತವನ್ನು ಹೋಲಿಕೆ ಮಾಡಿದ್ದಾರೆ.

ಅಮೆರಿಕದ ಡಲ್ಲಾಸ್‌ನಲ್ಲಿ ಸಾರ್ವಜನಿಕ ಭಾಷಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರ್​ಎಸ್​ಎಸ್​ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೆಕ್ಸಾಸ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳು ಮತ್ತು ಭಾರತೀಯ ವಲಸಿಗರ ಸದಸ್ಯರನ್ನು ಉದ್ದೇಶಿಸಿ ಮಾಡಿದ ಸಂವಾದದಲ್ಲಿ ವಾಗ್ದಾಳಿ ನಡೆಸಿದ್ದಾರೆ.

#WATCH | Texas, USA: Lok Sabha LoP and Congress MP Rahul Gandhi says, "The RSS believes that India is one idea and we believe that India is a multiplicity of ideas. We believe that everybody should be allowed to participate, allowed to dream, and should be given space regardless… pic.twitter.com/uHULrGwa6X

— ANI (@ANI) September 9, 2024

ಮಹಿಳೆಯರ ಬಗೆಗಿನ ವರ್ತನೆಯು ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ಸೈದ್ಧಾಂತಿಕ ಹೋರಾಟದ ಭಾಗವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಬಿಜೆಪಿ ಅಥವಾ ಆರ್‌ಎಸ್‌ಎಸ್ ಮಹಿಳೆಯರು ನಿರ್ದಿಷ್ಟ ವಲಯಕ್ಕೆ ಮಾತ್ರಕ್ಕೆ ಸೀಮಿತವಾಗಿರಬೇಕು, ಅವರು ಮನೆಯಲ್ಲಿಯೇ ಇರಬೇಕು, ಅಡುಗೆ ಮಾಡಬೇಕು, ಅವರು ಹೆಚ್ಚು ಮಾತನಾಡಬಾರದು ಎಂದು ನಂಬುತ್ತಾರೆ. ಮಹಿಳೆಯರು ಏನು ಮಾಡಲು ಬಯಸುತ್ತಾರೆಯೋ ಅದನ್ನು ಮಾಡಲು ಅವರಿಗೆ ಅವಕಾಶ ನೀಡಬೇಕು ಎಂದು ನಾವು ನಂಬುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತವು ಒಂದು ಕಲ್ಪನೆ ಎಂದು ಆರ್‌ಎಸ್‌ಎಸ್ ನಂಬುತ್ತದೆ. ಭಾರತವು ಅನೇಕ ವಿಚಾರಗಳೆಂದು ನಾವು ನಂಬುತ್ತೇವೆ. ಪ್ರತಿಯೊಬ್ಬರಿಗೂ ಭಾಗವಹಿಸಲು ಅವಕಾಶ ನೀಡಬೇಕು, ಕನಸು ಕಾಣಲು ಅವಕಾಶ ನೀಡಬೇಕು ಮತ್ತು ಅವರ ಜಾತಿ, ಭಾಷೆ, ಧರ್ಮ, ಸಂಪ್ರದಾಯ ಅಥವಾ ಇತಿಹಾಸವನ್ನು ಲೆಕ್ಕಿಸದೆ ಜಾಗವನ್ನು ನೀಡಬೇಕು ಎಂದು ನಾವು ನಂಬುತ್ತೇವೆ. ಭಾರತದ ಪ್ರಧಾನಿ ಮೋದಿ ಭಾರತದ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಭಾರತದಲ್ಲಿ ಲಕ್ಷಾಂತರ ಜನರು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪಾಶ್ಚಿಮಾತ್ಯ ದೇಶಗಳಲ್ಲಿಯೂ ಉದ್ಯೋಗದ ಸಮಸ್ಯೆ ಇದೆ. ಭಾರತದಲ್ಲಿ ಉದ್ಯೋಗ ಸಮಸ್ಯೆ ಇದೆ. ಆದರೆ, ಜಗತ್ತಿನ ಹಲವು ದೇಶಗಳಲ್ಲಿ ಉದ್ಯೋಗದ ಸಮಸ್ಯೆ ಇಲ್ಲ. ಚೀನಾದಲ್ಲಿ ಉದ್ಯೋಗ ಸಮಸ್ಯೆ ಖಂಡಿತ ಇಲ್ಲ. ವಿಯೆಟ್ನಾಂನಲ್ಲಿ ಉದ್ಯೋಗದ ಸಮಸ್ಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನೀವು 1940, 50 ಮತ್ತು 60ರ ದಶಕಗಳಲ್ಲಿ ಯುನೈಟೆಡ್ ಸ್ಟೇಟ್ಸ್ ಅನ್ನು ನೋಡಿದರೆ ಅದು ಜಾಗತಿಕ ಉತ್ಪಾದನೆಯ ಕೇಂದ್ರವಾಗಿತ್ತು. ಎಲ್ಲ ಕಾರುಗಳು, ವಾಷಿಂಗ್ ಮಷಿನ್‌ಗಳು, ಟಿವಿಗಳು, ಎಲ್ಲವೂ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮಾಡಲ್ಪಟ್ಟಿದೆ. ಬಳಿಕ ಈ ಉತ್ಪಾದನೆಯು ಅಮೆರಿಕದಿಂದ ಸ್ಥಳಾಂತರಗೊಂಡಿತು. ಅದು ಕೊರಿಯಾಕ್ಕೆ ಹೋಯಿತು, ಅಲ್ಲಿಂದ ಜಪಾನ್‌ಗೆ ಹೋಯಿತು. ಅಂತಿಮವಾಗಿ, ಅದು ಚೀನಾಕ್ಕೆ ಹೋಯಿತು. ಇಂದು ನೋಡಿದರೆ ಜಾಗತಿಕ ಉತ್ಪಾದನೆಯಲ್ಲಿ ಚೀನಾ ಮೇಲುಗೈ ಸಾಧಿಸುತ್ತಿದೆ. ಹಾಗಾದರೆ ಏನಾಗಿದೆ? ಪಶ್ಚಿಮ ದೇಶಗಳು, ಅಮೆರಿಕ, ಯುರೋಪ್ ಮತ್ತು ಭಾರತವು ಉತ್ಪಾದನೆಯ ಕಲ್ಪನೆಯನ್ನು ಕೈಬಿಟ್ಟಿದೆ. ಅವರು ಅದನ್ನು ಚೀನಾಕ್ಕೆ ಹಸ್ತಾಂತರಿಸಿದ್ದಾರೆ. ಉತ್ಪಾದನಾ ಕ್ರಿಯೆಯು ಉದ್ಯೋಗಗಳನ್ನು ಸೃಷ್ಟಿಸುತ್ತದೆ. ನಾವು ಏನು ಮಾಡುತ್ತೇವೆ, ಅಮೆರಿಕನ್ನರು ಏನು ಮಾಡುತ್ತಾರೆ, ಪಾಶ್ಚಿಮಾತ್ಯರು ಏನು ಮಾಡುತ್ತಾರೆ ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭಯವು ಜನರಲ್ಲಿ ಮರೆಯಾಗಿದೆ ಎಂದು ಅವರು ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕೆಲವೇ ನಿಮಿಷಗಳಲ್ಲಿ ಭಾರತದಲ್ಲಿ ಯಾರೂ ಬಿಜೆಪಿ ಅಥವಾ ಭಾರತದ ಪ್ರಧಾನ ಮಂತ್ರಿಗೆ ಹೆದರುವುದಿಲ್ಲ ಎಂದು ನಾವು ನೋಡಿದ್ದೇವೆ ಎಂದಿದ್ದಾರೆ.

Previous Post

ಸಿಎಂಗಳಿಗೆ ಸಿಗದ ಮೋದಿ ಡಿಕೆಶಿಗೆ ಸಿಕ್ಕಿದ್ದು ಹೇಗೆ? ಕಾಂಗ್ರೆಸ್‌ ಹೈಕಮಾಂಡ್ ಅಸಮಾಧಾನ; ಏನಿದರ ಸೀಕ್ರೆಟ್‌?

Next Post

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಭಾರಿ ಮಳೆ

Next Post
Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಭಾರಿ ಮಳೆ

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿ ಹಲವೆಡೆ ಭಾರಿ ಮಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.