
ಮಂಗಳೂರು: ಪಾಕ್ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಅಮಾಯಕ ಯುವಕರ ಬಂಧನ ಖಂಡಿಸಿ ಇಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಸ್ಪಿ ಕಚೇರಿ ಛಲೋದಲ್ಲಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಆಗಮಿಸಿ ಪ್ರತಿಭಟನಕಾರರ ಮನವಿಯನ್ನು ಸ್ವೀಕರಿಸದರು.
ಬಂಧಿತ ಅಮಾಯಕ ಯುವಕರನ್ನು ಬಿಡುಗಡೆಗೊಳಿಸಬೇಕು, ನೈಜ ಆರೋಪಿಗಳ ಬಂಧನವಾಗಬೇಕು ಮತ್ತು ಬೆಳ್ತಂಗಡಿ ಎಸೈ ನಂದಕುಮಾರ್ ಅಮಾನತು ಮಾಡಬೇಕೆಂದು ಪ್ರತಿಭಟನಕಾರರು ಬೇಡಿಕೆ ಇಟ್ಟಿದ್ದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಆಯುಕ್ತರು ಪ್ರತಿಭಟನಕಾರರ ಮನವಿಯನ್ನು ಸ್ವೀಕರಿಸಿ ಹಿರಿಯ ಅಧಿಕಾರಿಗಳಿಗೆ ರವಾನಿಸಲಾಗುವುದೆಂದು ತಿಳಿಸಿದರು. ಅಲ್ಲದೆ ಶಾಂತಿಯುತ ಪ್ರತಿಭಟನೆ ನಡೆಸಿದ್ದಕ್ಕೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು