ಕೋಟಾ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕಿಶೋರ್ ಕುಮಾರ್ ಪುತ್ತೂರ್ಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ. SDPI ಅನ್ವರ್ ಸದಾತ್ ರವರನ್ನು ಘೋಷಣೆ ಮಾಡಿದೆ ಇದರ ಬೆನ್ನಲ್ಲೆ ಕಾಂಗ್ರೆಸ್ ಸಹ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ನವದೆಹಲಿ, (ಅಕ್ಟೋಬರ್ 02): ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ

