Jammu Kashmir Election Result 2024: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ.
ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಟ್ರೆಂಡ್ ಪ್ರಕಾರ, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆ ಮಾಡುವ ಸಾಧ್ಯತೆಗಳಿವೆ. ಎರಡೂ ಪಕ್ಷಗಳು 45ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ 25-26ರಲ್ಲಿ ಮುನ್ನಡೆಯಲ್ಲಿದೆ. ಪಿಡಿಒ ಕೇವಲ ಒಂದಂಕಿಗೆ ಸೀಮಿತವಾಗಿದೆ. ಜಮ್ಮು ಕಾಶ್ಮೀರ 90 ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರ ರಚನೆಗೆ 46 ಕ್ಷೇತ್ರಗಳಲ್ಲಿ ಗೆಲ್ಲಬೇಕಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

2019ರಲ್ಲಿ 370 ನೇ ವಿಧಿ ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ರಚಿಸಲಾಗಿದೆ. ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆಯಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಜಮ್ಮು ಕಾಶ್ಮೀರದ 20 ಜಿಲ್ಲಗಳಲ್ಲಿ 20 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆ ವೇಳೆಗೆ ಭಾಗಶಃ ಫಲಿತಾಂಶ ತಿಳಿಯಲಿದೆ.
