ಮಂಗಳೂರು: ಇತ್ತೀಚೆಗೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲ ಅನುಚಿತ ವಸ್ತುಗಳನ್ನು ಅಸಹ್ಯಕರ ರೀತಿಯಲ್ಲಿ ಇರುವಂತಹ ಬರವಣಿಗೆಗೆಳನ್ನು ಹಾಕಿರುವಂತದ್ದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯವನ್ನು ಮಾಡುತ್ತೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಹೇಳಿದ್ದಾರೆ.
ಧಾರ್ಮಿಕ ಕೇಂದ್ರಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಸಿಸಿಟಿವಿ ಇಲ್ಲವೇ ಸೆಕ್ಯೂರಿಟಿಯನ್ನು ನೇಮಿಸಬೇಕೆಂದು ಅವರು ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಲ್ಲಿ ಮನವಿ ಮಾಡಿದರು.
ಅಲ್ಲದೇ ಸಾರ್ವಜನಿಕರು ಈ ತರಹದ ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಪೊಲೀಸರಿಗೆ ನೆರವಾಗಬೇಕೆಂದು ಮನವಿ ಮಾಡಿದರು. ದೂರು ಮತ್ತು ಮಾಹಿತಿ ನೀಡಲು 9480802300 ನಂಬರನ್ನು ಸಂಪರ್ಕಿಸಲು ಕಮಿಷನರ್ ಕೋರಿಕೊಂಡಿದ್ದಾರೆ.
