Assembly Election Results 2024: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ಹಾಗೂ ಉಪ ಚುನಾವಣೆಗಳ ಫಲಿತಾಂಶ ಇನ್ನು ಕೆಲವೇ ಗಂಟೆಗಳಲ್ಲಿ ಹೊರಬರಲಿದೆ. ಈ ಚುನಾವಣೆಯಲ್ಲಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ನಡುವಿನ ಸ್ಪರ್ಧೆಯ ಫಲಿತಾಂಶದ ಮೇಲೆ ಎಲ್ಲರ ಚಿತ್ತವಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಆಡಳಿತಾರೂಢ ಮೈತ್ರಿಯು ಮಹಾರಾಷ್ಟ್ರದಲ್ಲಿ ಆರಂಭಿಕ ಟ್ರೆಂಡ್ ಪ್ರಕಾರ 288 ರಲ್ಲಿ 177 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದೆ ಮತ್ತು ಆಪ್ ಇಂಡಿಯಾ ಬ್ಲಾಕ್ 93 ಸ್ಥಾನಗಳೊಂದಿಗೆ ದೂರದ ಎರಡನೇ ಸ್ಥಾನದಲ್ಲಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಬ್ಲಾಕ್ ಮತ್ತು ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 81 ಸ್ಥಾನಗಳಲ್ಲಿ 41 ಮತ್ತು 37 ರಲ್ಲಿ ಮುನ್ನಡೆಯೊಂದಿಗೆ ಜಾರ್ಖಂಡ್‌ನಲ್ಲಿ ನೆಕ್ ಟು ನೆಕ್ ಫೈಟ್ ಇದೆ. ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ವಿರುದ್ಧ ಆಡಳಿತಾರೂಢ ಮಹಾಯುತಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗದ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಒಟ್ಟು 81 ಸ್ಥಾನಗಳ ಪೈಕಿ ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ ಮತದಾನ ನಡೆದರೆ, ಎರಡನೇ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ವರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಮುನ್ನಡೆ ಸಾಧಿಸಿದ್ದಾರೆ. ಶಿವಸೇನೆ ನಾಯಕ ಮಿಲಿಂದ್ ದಿಯೋರಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಆದಿತ್ಯ ಠಾಕ್ರೆ ವರ್ಲಿ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. 2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ, ಆದಿತ್ಯ ಠಾಕ್ರೆ ಶೇಕಡಾ 69 ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದರು, ಎನ್‌ಸಿಪಿಯ ಸುರೇಶ್ ಮಾನೆ ಅವರನ್ನು ಸೋಲಿಸಿದರು.

ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮುನ್ನಡೆ ಸಾಧಿಸಿದ್ದಾರೆ. ಅವರ ವಿರುದ್ಧ ಅವರ ಸಹೋದರನ ಮಗ ಯುಗೇಂದ್ರ ಪವಾರ್ ಕಣದಲ್ಲಿದ್ದಾರೆ. ನಾಗ್ಪುರದಲ್ಲಿ ದೇವೇಂದ್ರ ಫಡ್ನವಿಸ್ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ಜೀಶಾನ್ ಸಿದ್ದಿಕಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಜಾರ್ಖಂಡ್‌ನಲ್ಲಿ ಚಂಪೈ ಸೊರೆನ್ ಮುನ್ನಡೆ ಸಾಧಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
ಮಹಾರಾಷ್ಟ್ರದಲ್ಲಿ (Maharashtra) ಬಿಜೆಪಿ (BJP) ನೇತೃತ್ವದ ಮಹಾಯುತಿ (Mahayuti) ಒಕ್ಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 288 ಕ್ಷೇತ್ರಗಳು ಇದ್ದು ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದೆ. ಬಹುತೇಕ ಸಮೀಕ್ಷೆಗಳು ಮಹಾಯುತಿ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಹೇಳಿದ್ದವು.
ಜಾರ್ಖಂಡ್‌ನಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಹೇಮಂತ್ ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಆಡಳಿತಾರೂಢ ಒಕ್ಕೂಟವು 81 ಸದಸ್ಯ ಬಲದ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಬೇಕಾದ 42 ಮ್ಯಾಜಿಕ್ ನಂಬರ್‌ಅನ್ನು ದಾಟಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಎನ್‌ಡಿಎ 30 ರಲ್ಲಿ ಮುನ್ನಡೆ ಸಾಧಿಸಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 149 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಎನ್‌ಸಿಪಿ 59 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ 101 ಸ್ಥಾನಗಳಲ್ಲಿ, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಈ ಚುನಾವಣೆಯಲ್ಲಿ ಉದ್ಧವ್ ಶಿವಸೇನೆ ಮತ್ತು ಶಿಂಧೆ ಶಿವಸೇನೆ ಅಭ್ಯರ್ಥಿಗಳು 50 ಸ್ಥಾನಗಳಲ್ಲಿ ಮುಖಾಮುಖಿಯಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್‌ಡಿಎ ಡಬಲ್ ಸೆಂಚುರಿ, ಜಾರ್ಖಂಡ್‌ನಲ್ಲಿ ಬಹುಮತದತ್ತ ಐಎನ್‌ಡಿಐಎ!
Maharashtra, Jharkhand election results: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ, ಹಲವು ರಾಜ್ಯಗಳಲ್ಲಿ ಉಪಚುನಾವಣೆಗಳ ಮತಎಣಿಕೆ ಇಂದು ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ, ಮಹಾಯುತಿ ಮೈತ್ರಿಕೂಟವು ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಿದ್ದರೆ, ಜಾರ್ಖಂಡ್‌ನಲ್ಲಿ, JMM ಮತ್ತು ಅದರ ಮಿತ್ರಪಕ್ಷಗಳು NDA ವಿರುದ್ಧ ಮುಖಾಮುಖಿಯಾಗಿವೆ.
