ಲಕ್ನೋ: ಮೊಘಲರ ಕಾಲದ ಜಾಮಾ ಮಸೀದಿ ಸರ್ವೇಗೆ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, 20 ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಸಂಭಾಲ್‌ನಲ್ಲಿ ನಡೆದಿದೆ.

ಸರ್ವೇ ತಂಡ ಮಸೀದಿ ಬಳಿ ಆಗಮಿಸಿತ್ತು. ಇದು, ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು.
ಅಡ್ವೋಕೇಟ್ ಕಮಿಷನರ್ ನೇತೃತ್ವದ ಸಮೀಕ್ಷಾ ತಂಡವು ಸರ್ವೇ ಕೆಲಸ ಪ್ರಾರಂಭಿಸುತ್ತಿದ್ದಂತೆ ಮಸೀದಿಯ ಬಳಿ ಪ್ರತಿಭಟನೆ ಪ್ರಾರಂಭ ವಾಯಿತು, ಈ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಪ್ರಾಯೋಗಿಸಿ ಏಕಾಏಕಿ ಗುಂಡಿನ ದಾಳಿ ನಡೆಸಿ ಮೂವರು ಯುವಕರನ್ನು ಕೊಂದು ಹಾಕಿದರು. ನಂತರ ಪೊಲೀಸರು ಮಸೀದಿಗೆ ಪ್ರವೇಶಿಸದಂತೆ ತಡೆಯಲು ಜನರು ಪ್ರಯತ್ನಿಸಿದರು

ನಯೀಮ್, ಬಿಲಾಲ್ ಮತ್ತು ನೌಮನ್ ಮೃತರು ಎಂದು ಗುರುತಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಯ ಗನ್ನರ್ ಸೇರಿದಂತೆ ಕೆಲವು ಪೊಲೀಸರೂ ಗಾಯಗೊಂಡಿದ್ದಾರೆ ಎಂದು ಮೊರಾದಾಬಾದ್ ವಿಭಾಗೀಯ ಆಯುಕ್ತ ಆಂಜನೇಯ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮಸೀದಿ ಸರ್ವೇ ನಡೆಸುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು. ಮಂಗಳವಾರವೂ ಇದೇ ಸಮೀಕ್ಷೆ ನಡೆದಿರುವುದರಿಂದ ಸಂಭಾಲ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.