
ಉಡುಪಿ: ಉಡುಪಿ ಜಿಲ್ಲಾಡಳಿತ ದಿಂದ ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು.
ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಚಿವರು ಗೌರವ ವಂದನೆ ಸ್ವೀಕಾರ ಮಾಡಿದರು. ವಿವಿಧ ಪೊಲೀಸ್ ತಂಡಗಳಿಂದ ಧ್ವಜಾರೋಹಣದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು. ಈ ಸಂದರ್ಭ ಜಿಲ್ಲಾಡಳಿತ ವತಿಯಿಂದ ಕೃಷಿ ಸಾಧಕರಿಗೆ ಸನ್ಮಾನ ನಡೆಯಿತು.
ಶಾಸಕ ರಘುಪತಿ ಭಟ್ , ಜಿಲ್ಲಾಧಿಕಾರಿ ಜಿ.ಜಗದೀಶ್ , ಜಿಪಂ ಅಧ್ಯಕ್ಷ ದಿನಕರ ಬಾಬು ಸಹಿತ ಅನೇಕ ಗಣ್ಯರು, ವಿದ್ಯಾರ್ಥಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು
ಆಚರಣೆ